ಮಲ್ಲೇಶ್ವರದ ನಿಜವಾದ ಅಭಿವೃದ್ಧಿಗೆ ಬದ್ಧ: ಕೆಂಗಲ್ ರೇಣು ಭರವಸೆ
ಬೆಂಗಳೂರು ಮೇ 9: ನಗರದ ಹೃದಯ ಭಾಗದಲ್ಲಿರುವ ಹಾಗೂ ನಗರದ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿರುವ ಮಲ್ಲೇಶ್ವರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ನಾನು ಹಗಲಿರುಳು ಶ್ರಮಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆಂಗಲ್ ಶ್ರೀಪಾದ ರೇಣು ಹೇಳಿದರು.
ಮತ್ತಿಕೆರೆಯ ನೇತಾಜಿ ಸರ್ಕಲ್ ನಿಂದ ಪ್ರಾರಂಭವಾದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರ ವಂಶಸ್ಥ ನಾನು. ಬೆಂಗಳೂರು ಅಭಿವೃದ್ದಿಗೆ ಕೆಂಗಲ್ ಹನುಮಂತಯ್ಯ ಅವರು ಹಾಗೂ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ನನ್ನ ಕಾಪಾಡಲಿವೆ.
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡ ನನಗೆ ಇದರ ಪ್ರತ್ಯಕ್ಷ ದರ್ಶನವಾಗಿದೆ ಎಂದರು.

ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದು ಕಾಣುವ ಈ ಕ್ಷೇತ್ರದ ಕೆಲವು ಭಾಗಗಳಲ್ಲಿ ಕುಡಿಯುವ ನೀರು ದೊರಕುತ್ತಿಲ್ಲ. ಮೇಲ್ವರ್ಗದ ಜನರು ವಾಸಿಸುವ ಸ್ಥಳಗಳ ಸುಂದರೀಕರಣ ಗೊಳಿಸಿರುವ ಶಾಸಕರು ಕೆಳ ವರ್ಗದ ಜನರ ಸಮಸ್ಯೆಗಳ ಬಗ್ಗೆ ಜಾಣ ಕಿವುಡುತನ ತೋರಿಸಿದ್ದಾರೆ. ಕ್ಷೇತ್ರದ ಪ್ರಜ್ಞಾವಂತ ಮತದಾರ ಇದನ್ನು ಗಮನಿಸಿದ್ದು ಕಾಂಗ್ರೆಸ್ ಪಕ್ಷದ ಆಡಳಿತ ಬಗ್ಗೆ ಒಲವು ತೋರಿಸುತ್ತಿದ್ದಾನೆ.
ಇಂತಹ ಸುಸಮಯದಲ್ಲಿ ತಾವು ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಬಹಳ ಸಂತಸ ತಂದಿದೆ. ಪ್ರಜ್ಞಾವಂತ ಮತದಾರರ ಕ್ಷೇತ್ರ ಎಂದೇ ಕರೆಯಲ್ಪಡುವ ಮಲ್ಲೇಶ್ವರಂ ನಲ್ಲಿ ಕಾಂಗ್ರೆಸ್ ವತಿಯಿಂದ ಟಿಕೆಟ್ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರುಗಳಿಗೆ ಅಭಿನಂದನೆ ಸಲ್ಲಿಸಿದರು.

ಜನರ ಆಶೋತ್ತರಗಳಿಗೆ ದನಿಯಾಗಿದ್ದು ನನಗೆ ಬಹುಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಇದೇ ಸಂಧರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬೈಕ್ ರ‍್ಯಾಲಿಯಲ್ಲಿ 400 ಕ್ಕೂ ಹೆಚ್ಚು ಬೈಕ್ ಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ರೋಡ್ ಶೋ ನಡೆಸಿದ್ದು ಎಲ್ಲರ ಗಮನ ಸೆಳೆಯಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications