ಶಬರಿಮಲೆ ವಿವಾದ: ಕೇರಳ ಸರ್ಕಾರ ವಿರುದ್ಧ ಅನಂತ್‌ಕುಮಾರ್ ಹೆಗಡೆ ಗುಡುಗು
ಬೆಂಗಳೂರು, ಜನವರಿ 03: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸಿದೆ ಎಂದು ಕೇಂದ್ರ ಬಿಜೆಪಿ ಸಚಿವ ಅನಂತ್‌ಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಹಂಕಾರದ ವರ್ತನೆಯಿಂದಲೇ ಕೇರಳದಲ್ಲಿ ಗೊಂದಲ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.
ಸುಪ್ರಿಂಕೋರ್ಟ್ ತೀರ್ಪಿನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಸುವ್ಯಸ್ಥೆ ಕಾಪಾಡಬೇಕಾದುದು ರಾಜ್ಯ ಸರ್ಕಾರದ ಕರ್ತವ್ಯ. ಇತರರ ನಂಬಿಕೆಗಳಿಗೆ ತೊಡಕಾಗದಂತೆ ತೀರ್ಪನ್ನು ಜಾರಿಗೆ ತರಲು ಕೇರಳ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದರು.

ಶಬರಿಮಲೆ ವಿವಾದ ಉಲ್ಬಣವಾದಾಗಿನಿಂದಲೂ ಕೇರಳ ಸರ್ಕಾರವು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹಾಡುಹಗಲೆ ಅವರ ಮೇಲೆ ಅತ್ಯಾಚಾರ ಆಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದರು.












Click it and Unblock the Notifications