ಹೆಗ್ಗೆಡೆ ಅವರಿಗೆ ಅವಹೇಳನ, ಗಣ್ಯರಿಂದ ಪ್ರತಿಭಟನೆ

ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಆನಂದರಾವ್ ಸರ್ಕಲ್ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ವೀರೇಂದ್ರ ಹೆಗ್ಗಡೆ ಅವರಿಗೆ ಆಗಿರುವ ಅಪಮಾನದ ಬಗ್ಗೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಬೇಕಾದರೆ ವಹಿಸಲಿ ಆದರೆ, ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಡೆ ಒಡ್ಡಬೇಕು ಎಂದು ಸಾಹಿತಿ ಕಮಲಾ ಹಂಪನಾ ಅವರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸೌಜನ್ಯಳ ಕೊಲೆ ನಡೆದ ದಿನ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಧರ್ಮಾಧಿಕಾರಿ ಕುಟುಂಬದ ಸದಸ್ಯರು ಘಟನೆ ನಡೆದ ಊರಿನಲ್ಲೇ ಇರಲಿಲ್ಲ. ಆದರೂ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಅವರ ಮೇಲೆ ಅರೋಪ ಹೊರೆಸಲಾಗುತ್ತಿದೆ ಎಂದು ಸಾಹಿತಿ ಕಮಲಾ ದೂರಿದರು.
ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್ ಅವರು ಮಾತನಾಡಿ, ಸೌಜನ್ಯಳ ಕೊಲೆ ಪ್ರಕರಣವನ್ನು ಧರ್ಮಕ್ಷೇತ್ರದ ಚಟುವಟಿಕೆಗಳಿಗೆ ತಳುಕು ಹಾಕುವುದು ಸರಿಯಲ್ಲ. ನಾನೂ ಕೂಡಾ ಧರ್ಮಕ್ಷೇತ್ರದ ಹಳೆ ವಿದ್ಯಾರ್ಥಿಯಾಗಿದ್ದು, ಅಲ್ಲಿನ ಚಟುವಟಿಕೆಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿದರು.
ಈಗಾಗಲೇ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು 15ದಿನದೊಳಗೆ ಸಿಐಡಿ ವರದಿ ಬರಲಿದೆ. ಸಿಐಡಿ ತನಿಖೆ ಮೇಲೆ ನಂಬಿಕೆ ಇಲ್ಲದಿದ್ದರೆ, ಪ್ರಕರಣವನ್ನು ಸಿಬಿಐಗೆ ವಹಿಸಲಿ. ಆದರೆ, ಆರೋಪ ಸಾಬೀತಾಗುವವರೆಗೂ ಧರ್ಮಾಧಿಕಾರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಬಿಎಲ್ ಶಂಕರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕ ಸಾ.ರಾ ಗೋವಿಂದು, ರಾಕ್ ಲೈನ್ ವೆಂಕಟೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಿನಿಮಾ, ಸಾಹಿತ್ಯ ಕ್ಷೇತ್ರದ ಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂದೆ ಬಂದಿದ್ದಾರೆ ಎನ್ನಲಾಗಿದೆ.[ಸೌಜನ್ಯ ಹತ್ಯೆ ಆರೋಪಿಗಳಿಗೆ ಶಿಕ್ಷೆ ಯಾವಾಗ?]












Click it and Unblock the Notifications