ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಯಡಿಯೂರಪ್ಪ ಕೊರಳಿಗೆ ಡಿ ನೋಟಿಫಿಕೇಷನ್ ಭೂ ಕಂಟಕ !

|
Google Oneindia Kannada News

ಬೆಂಗಳೂರು, ಮಾರ್ಚ್ 17: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೂ ಕಂಟಕ ಬಿಟ್ಟಂತೆ ಕಾಣುತ್ತಿಲ್ಲ. ಲೋಕಾಯುಕ್ತ ನ್ಯಾಯಾಲಯ ಆದೇಶದಿಂದ ಪಾರಾಗಿದ್ದ ಭೂ ಕಂಟಕ ಬಿಎಸ್‌ವೈ ಅವರಿಗೆ ಮತ್ತೆ ಸುತ್ತಿ ಕೊಂಡಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಸ್ವಾಧೀನ ಪಡಿಸಿಕೊಂಡಿದ್ದ ಭೂಮಿ ಡಿ ನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ಹೂವಿನಾಯಕನಹಳ್ಳಿ ಡಿ ನೋಟಿಫಿಕೇಷನ್ ಭೂ ಹಗರಣ ತನಿಖೆ ಎದುರಿಸಬೇಕಾಗಿದೆ.

ಹೂವಿನಾಯಕನಹಳ್ಳಿಯಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿತ್ತು. ಅದರಲ್ಲಿ 20 ಎಕರೆ ಭೂಮಿಯನ್ನು ಮುಖ್ಯಮಂತ್ರಿ ನಿಯಮ ಉಲ್ಲಂಘಿಸಿ ಡಿ ನೋಟಿಫಿಕೇಷನ್ ಮಾಡಿದ್ದರು. ಡಿ ನೋಟಿಫೈ ಅಕ್ರಮಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೈಗಾರಿಕಾ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಮತ್ತಿತರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದರು. ದೋಷಾರೋಪ ಪಟ್ಡಿಯನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

KIADB land de-notification scam : trouble for CM BS Yediyurappa

ಪ್ರಕರಣ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಹಾಗೂ ಕಟ್ಡಾ ಸುಬ್ರಮಣ್ಯ ನಾಯ್ಡು ಅವರನ್ನು ಪ್ರಕರಣದಿಂದ ಕೈ ಬಿಟ್ಟಿತ್ತು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ನ್ಯಾ. ಮೈಕಲ್ ಡಿ. ಕುನ್ನಾ ಅವರಿದ್ದ ನ್ಯಾಯಪೀಠ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಸಿಎಂ ಮೇಲಿನ ಭೂ ಕಂಟಕ ಆರೋಪ ಪ್ರಕರಣ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.

Recommended Video

Modi's best 3 advise to avoid covid 19 | Oneindia Kannada

ಕೆಐಎಡಿಬಿ ಡಿನೋಟಿಫಿಕೇಶ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಮಣ್ಯಂ ನಾಯ್ತು ಅದ್ರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಕೇಸ್‌ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನ ಹೈಕೋರ್ಟ್‌ ರದ್ದುಗೊಳಿಸಿದೆ. ದೋಷಾರೋಪ ಪಟ್ಟಿ ಅನುಸಾರ ಕ್ರಮ ಕೈಗೊಳ್ಳಿ ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

English summary
The High Court has quashed the special order in connection with the Huvinayakanahalli KIADB land de notification case know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X