ಗಣಿ ಕಪ್ಪ ಪ್ರಕರಣ: ಹೈ ಕೋರ್ಟ್‌ಗೆ ಯಡಿಯೂರಪ್ಪ
ಬೆಂಗಳೂರು, ನ. 18: ಜಿಂದಾಲ್ ಸಮೂಹದ ಸೌತ್‌ವೆಸ್ಟ್ ಮೈನಿಂಗ್ ಕಂಪನಿಯಿಂದ ಗಣಿ ಕಪ್ಪ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. [ಯಡಿಯೂರಪ್ಪ, ಈಶ್ವರಪ್ಪಗೆ ಲೋಕಾಯುಕ್ತದಿಂದ ಸಿಹಿ ಸುದ್ದಿ]
ಗಣಿ ಕಪ್ಪ ಕುರಿತು ನಡೆಸುತ್ತಿರುವ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ನ್ಯಾ. ಕೆ.ಎನ್. ಫಣೀಂದ್ರ ಅವರ ಏಕ ಸದಸ್ಯ ಪೀಠ ಯಡಿಯೂರಪ್ಪ ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಲು ಆದೇಶಿಸಿ, ಸಿಬಿಐಗೆ ನೋಟಿಸ್ ನೀಡಿದೆ. [ಮಂಜುನಾಥ ಸ್ವಾಮಿಗೆ ಯಡಿಯೂರಪ್ಪ ವಿಶೇಷ ಪೂಜೆ]
ಪ್ರಕರಣವೇನು?: ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್ ಸಮೂಹದ ಸೌತ್‌ವೆಸ್ಟ್ ಮೈನಿಂಗ್ ಕಂಪನಿಗೆ ಗಣಿ ಪರವಾನಗಿ ಕೊಡಿಸಲು ತಮ್ಮ ಪುತ್ರರ ಒಡೆತನದ ಪ್ರೇರಣಾ ಟ್ರಸ್ಟ್‌ಗೆ 20 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದರು ಎಂದು ದೂರು ದಾಖಲಾಗಿತ್ತು.












Click it and Unblock the Notifications