ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿಮ್ಸ್‌ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ರೋಗಿಗಳು ಬೇರೆಡೆಗೆ ಶಿಫ್ಟ್‌: ಸಚಿವ ಡಾ.ಕೆ. ಸುಧಾಕರ್

|
Google Oneindia Kannada News

ಬೆಂಗಳೂರು, ಆಗಸ್ಟ್‌ 17: ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ಸಚಿವರು ಹೇಳಿದ್ದಾರೆ.

KIMS Hospital Oxygen Shortage, Quick Response By Govt: Minister K Sudhakar

ಅ.4 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ಅ.4 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ 40ಕ್ಕೂ ಹೆಚ್ಚು ರೋಗಿಗಳನ್ನು ವಿಕ್ಟೊರಿಯಾ, ಬೌರಿಂಗ್ & ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ಭಾರೀ ಗಾತ್ರದ ಆಕ್ಸಿಜನ್ ಸಿಲಿಂಡರ್ ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ, ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ 80,643 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಅದರಲ್ಲಿ 695 ಅಂದರೆ ಶೇ. 0.86ರಷ್ಟು ಸೋಂಕಿತರು ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಚಿಕಿತ್ಸೆಗೆ ಮೂಲಭೂತ ಸೌಕರ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದ್ದು ಯಾವುದೇ ಕೊರತೆಯಿಲ್ಲ.

ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿಸಲಾಗಿದೆ.

English summary
Govt of karnataka quick response by when KIMS hospital facing oxygen shortage, patients shifted other hospital says minister k Sudhakar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X