ಬಯೋಕಾನ್ ಮುಖ್ಯಸ್ಥೆಗೆ ಕೋವಿಡ್ 19 ಸೋಂಕು
ಬೆಂಗಳೂರು, ಆಗಸ್ಟ್ 18 : ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಸೋಮವಾರ 6317 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,33,283ಕ್ಕೆ ಏರಿಯಾಗಿದೆ.
Recommended Video
ಕೋವಿಡ್ ಸೋಂಕು ತಗುಲಿರುವ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ. "ಕೋವಿಡ್ ಸೋಂಕಿನ ಎಣಿಕೆಯಲ್ಲಿ ನಾನು ಸೇರಿಕೊಂಡಿದ್ದೇನೆ" ಎಂದು ಹೇಳಿದ್ದಾರೆ.
ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಬಯೋಕಾನ್ ಸಹ ಒಂದು. ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಪ್ರತಿಷ್ಠಿತ ಉತ್ಪನ್ನಗಳನ್ನು ನೀಡುತ್ತಿರುವ ಬಯೋಕಾನ್ ಕಡಿಮೆ ಬಂಡವಾಳದಲ್ಲಿ ಆರಂಭವಾಗಿ ಬೆಳೆದ ದೊಡ್ಡ ಕಂಪನಿಯಾಗಿದೆ.

ಬಯೋಕಾನ್ ಸಂಸ್ಥೆಯನ್ನು ಕಟ್ಟಿದ ಕಿರಣ್ ಮಜುಂದಾರ್ ಶಾ ಅವರ ಸಾಧನೆಗಾಗಿ ಕೇಂದ್ರ ಸರ್ಕಾರ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಬಂದಿವೆ. ಫೈನಾನ್ಸಿಯಲ್ ಟೈಮ್ಸ್ ಹೆಸರಿಸಿರುವ ಐವತ್ತು ಗಣ್ಯರ ಪಟ್ಟಿಯಲ್ಲಿ ಕಿರಣ್ ಮಜುಂದಾರ್ ಶಾ ಸಹ ಇದ್ದಾರೆ.
ಸೋಮವಾರ ಬೆಂಗಳೂರು ನಗರದಲ್ಲಿ 2053 ಹೊಸ ಕೋವಿಡ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 91,864ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,408.












Click it and Unblock the Notifications