ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿಸ್ ಆಫ್‌ ಲವ್‌ನಲ್ಲಿ ಪಾಲ್ಗೊಳ್ಳುವವರಿಗೆ ಸಿಎಂ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ನ.19 : 'ನೈತಿಕ ಪೊಲೀಸ್ ಗಿರಿ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಿ, ಅಶ್ಲೀಲ, ಅಸಭ್ಯವಾಗಿ ವರ್ತಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದು ಕಿಸ್ ಆಫ್ ಲವ್ ಆಚರಣೆ ಮಾಡುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಅಶ್ಲೀಲ, ಅಸಭ್ಯವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. [ಕಿಸ್ ಆಫ್ ಲವ್ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ]

Siddaramaiah

ನೈತಿಕ ಪೊಲೀಸ್ ಗಿರಿ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಿದರೆ ಯಾವುದೇ ತೊಂದರೆಯಿಲ್ಲ, ಆದರೆ, ಬೀದಿಗಳಲ್ಲಿ ಕಿಸ್ ಡೇ ಆಚರಿಸುವ ಮೂಲಕ ಅಶ್ಲೀಲವಾಗಿ ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು. [ಮುಕ್ತ ಮುತ್ತು ಪ್ರೇಮಿಗಳಿಗೆ ಕೆಜೆ ಜಾರ್ಜ್ ಎಚ್ಚರಿಕೆ]

ತಂದೆ-ತಾಯಿಗಳು ವಿರೋಧಿಸಬೇಕು : ಕಿಸ್‌ ಆಫ್ ಲವ್‌ ಕಾರ್ಯಕ್ರಮನ್ನು ಎಲ್ಲ ತಂದೆ ತಾಯಿ ವಿರೋಧಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಡ್‌ರೂಮ್‌ನಲ್ಲಿ ಮಾಡುವುದನ್ನು ರಸ್ತೆಯಲ್ಲಿ ಮಾಡುವುದು ನೈತಿಕತೆ ಅಲ್ಲ, ಇದರಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. [ಬಂತು ಬೆಂಗಳೂರಿಗೂ ಬಂತು 'ಕಿಸ್ ಆಫ್ ಲವ್'!]

ಅನುಮತಿ ನೀಡಬೇಡಿ : ಕಿಸ್‌ ಆಫ್‌ ಲವ್ ನಂತರ ಪ್ರತಿಭಟನೆಯನ್ನು ನಡೆಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿ ಅವರು ಒತ್ತಾಯಿಸಿದ್ದಾರೆ.

English summary
Karnataka Chief Minister Siddaramaiah warns participants of 'Kiss of love' campaign in Bengaluru which scheduled before November end. CM said, action will be taken if they indulge in immoral activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X