ಕೆಜೆಪಿಗೆ ನಾನೇ ಅಧ್ಯಕ್ಷ, ಪ್ರಸನ್ನ ಕುಮಾರ್ ಹೊಸ ವರಸೆ

ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಸನ್ನ ಕುಮಾರ್, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಕರ್ನಾಟಕ ಜನತಾ ಪಕ್ಷ ನಮ್ಮ ಸುರ್ಪದಿಯಲ್ಲೇ ಇದ್ದು, ಈ ಕುರಿತು ಚುನಾವಣಾ ಆಯೋಗಕ್ಕೂ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು. [ಕೆಜೆಪಿ ಮುಗಿದ ಅಧ್ಯಾಯ : ಬಿಎಸ್ವೈ]
ಶುಕ್ರವಾರ ಕೆಜೆಪಿ ಪಕ್ಷದ ಸರ್ವ ಸದಸ್ಯರ ಸಭೆಯನ್ನು ನಡೆಸಲಾಗಿದ್ದು, ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಕೆಜೆಪಿ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದರು. [ಪ್ರಸನ್ನ ಕುಮಾರ್ ಅಪಹರಣದ ಕಥೆ]
ಕೆಜೆಪಿಯ ನಾಲ್ವರು ಶಾಸಕರು ಬಿಜೆಪಿ ಸೇರಿದ್ದಾರೆ. ಕೆಜೆಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದು, ಕೆಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನೇ ಕೆಜೆಪಿ ಅಧ್ಯಕ್ಷನಾಗಿದ್ದು, ಚುನಾವಣೆ ಎದುರಿಸಲಿದ್ದೇವೆ ಎಂದು ಪ್ರಸನ್ನ ಕುಮಾರ್ ಹೇಳಿದರು.
ಕೆಜೆಪಿ-ಬಿಜೆಪಿಗೆ ವಿಲೀನ ಸಾಧ್ಯವಿಲ್ಲ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದೇನೆ. ಕೆಜೆಪಿ ಕುರಿತ ವಿವಾದದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಾನೇ ಕೆಜೆಪಿ ಅಧಿಕೃತ ಅಧ್ಯಕ್ಷ ಎಂಬ ತೀರ್ಪು ಬರಲಿದೆ ಎಂದು ಪ್ರಸನ್ನ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications