ಕೆಜೆಪಿ ಸ್ಪರ್ಧಿಸುವ 12 ಲೋಕಸಭಾ ಕ್ಷೇತ್ರಗಳ ಘೋಷಣೆ!
ಬೆಂಗಳೂರು, ಸೆ.26 : ಬಿಜೆಪಿ ಜೊತೆಗಿನ ವಿಲೀನದ ಮಾತುಕತೆಗಳು ಅಂತಿಮ ಹಂತಕ್ಕೆ ಬರುವ ಮುನ್ನವೇ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಪಕ್ಷ ಲೋಕಸಭೆ ಚುನಾವಣೆಗೆ ಸಿದ್ಧವಾಗಿದೆ. ಬುಧವಾರ ಪಕ್ಷ ಸ್ಪರ್ಧಿಸುವ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂ.ಡಿ.ಲಕ್ಷ್ಮೀನಾರಾಯಣ, ಲೋಕಸಭೆ ಚುನಾವಣೆಯುಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎಂದು ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ರಾಜ್ಯದ 12 ಕ್ಷೇತ್ರಗಳಲ್ಲಿ ಮಾತ್ರ ಕೆಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಸೆ.30ರ ನಂತರ ರಾಜ್ಯದ ಮೂರು ಜಿಲ್ಲೆಗಳಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಎಲ್ಲೆಲ್ಲಿ ಸ್ಪರ್ಧೆ : ಬೆಳಗಾವಿ, ಚಿಕ್ಕೋಡಿ, ಧಾರವಾಡ, ಕೆನರಾ, ಬೀದರ್, ಕಲಬುರ್ಗಿ, ತುಮಕೂರುಉಡುಪಿ-ಚಿಕ್ಕಮಗಳೂರು, ಹಾವೇರಿ, ಬೆಂಗಳೂರು ಸೆಂಟ್ರಲ್, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಸಮಾವೇಶಗಳು : ಲೋಸಕಭೆ ಚುನಾವಣಾ ಪ್ರಚಾರ ಕಾರ್ಯವನ್ನು ಸೆ.30 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುವ ಮೂಲಕ ಪ್ರಾರಂಭಿಸಲಾಗುವುದು ಎಂದು ಲಕ್ಷ್ಮೀನಾರಾಯಣ ಹೇಳಿದರು.
ಅ.3 ರಂದು ಹುಬ್ಬಳ್ಳಿ, ಅ.9ರಂದು ಕಲಬುರ್ಗಿಯಲ್ಲಿಯೂ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆ ಮಾಡುವ ಜೊತೆಗೆ ಮೊದಲ ಸುತ್ತಿನ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.












Click it and Unblock the Notifications