KMF Election: ಇಂದು ಕೆಎಂಎಫ್ ಅಧ್ಯಕ್ಷರ ಚುನಾವಣೆ: ಸಿದ್ದರಾಮಯ್ಯ ಆಪ್ತ ಭೀಮಾನಾಯ್ಕ್ ಆಯ್ಕೆ ಸಾಧ್ಯತೆ

ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದ್ದು, ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ, ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.

ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಈವರೆಗೂ ಕೆಎಂಎಫ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

KMF Election Today

ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿತ್ತು, ಕೆಎಂಎಫ್‌ನ ಎಲ್ಲಾ ನಿರ್ದೇಶಕರ ಬೆಂಬಲ ಇದ್ದರೂ ಕೂಡ ಸಂಸ್ಥೆಯ ಪ್ರಗತಿಯ ದೃಷ್ಟಿಯಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಹೊಸ ಅಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ರೈತರು, ಹೈನುಗಾರರು ಮತ್ತು ಗ್ರಾಹಕರ ರಕ್ಷಣೆಗೆ ಸದಾ ಬದ್ಧವಾಗಿದ್ದೇನೆ. ಕೆಎಂಎಫ್ ವಾರ್ಷಿಕವಾಗಿ 20 ಸಾವಿರ ಕೋಟಿ ರೂಪಾಯಿ ವಹಿವಾಟು ಹೊಂದಿರುವ ರಾಜ್ಯದ ರೈತರ ಹೆಮ್ಮೆಯ ಸಂಸ್ಥೆಯಾಗಿದೆ. ನನ್ನ ಅವಧಿಯಲ್ಲಿ ಪಾರದರ್ಶಕ ಆಡಳಿತ ತರಲು ಶ್ರಮಿಸಿದ್ದೇನೆ, ಕೆಎಂಎಫ್‌ ಬಲಪಡಿಸಲು ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲಿ ಹೈನುಗಾರರ ಪರವಾಗಿ ನಿಂತಿದ್ದೇವೆ. ಎಲ್ಲಾ ಅಗತ್ಯ ಸಹಾಯಗಳನ್ನು ನೀಡುವ ಮೂಲಕ ಸಂಸ್ಥೆಯ ಹಿರಿಮೆ ಹೆಚ್ಚಿಸುವ ಕೆಲಸ ಮಾಡಿದ್ದೇನೆ ಎನ್ನುವ ತೃಪ್ತಿ ಇದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಸಿದ್ದರಾಮಯ್ಯ ಸೂಚನೆಯಂತೆ ಹಿಂದಕ್ಕೆ

ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಬಾಲಚಂದ್ರ ಜಾರಕಿಹೊಳಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ. ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು, ಆದರೆ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಅವರು ರಾಜಕೀಯದಲ್ಲಿ ಸಕ್ರಿಯವಾಗಿರುಲು ಕೆಎಂಎಫ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+