Video; ಗೃಹ ಸಚಿವರು ಹೊಗಳಿದ ಸಂಚಾರಿ ಪೊಲೀಸ್ ಸುರೇಶ್ ಯಾರು?
ಬೆಂಗಳೂರು, ಜನವರಿ 04; ಉದ್ಯಾನ ನಗರಿ ಬೆಂಗಳೂರಿನ ಸಂಚಾರಿ ಪೊಲೀಸರೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿವಿಧ ಕಾರಣಕ್ಕೆ ಜನರ ಆಕ್ರೋಶಕ್ಕೆ ಗುರಿಯಾಗುವ ಸಂಚಾರಿ ಪೊಲೀಸರ ಕಾರ್ಯಕ್ಕೆ ಈ ಬಾರಿ ಜನರು ಸೆಲ್ಯೂಟ್ ಎಂದು ಹೇಳುತ್ತಿದ್ದಾರೆ.
ಬೆಂಗಳೂರಿನ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸುರೇಶ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
ನಮ್ಮ ಸಂಚಾರಿ ಪೊಲೀಸರು ರಕ್ಷಣಾ ಕಾರ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ.
— Araga Jnanendra (@JnanendraAraga) January 2, 2023
ರಾಜಾಜಿನಗರದ ಟ್ರಾಫಿಕ್ ಪೊಲೀಸ್ ಶ್ರೀ ಸುರೇಶ್ ಅವರು, ಟವರ್‌ನಲ್ಲಿ ಸಿಲುಕಿದ್ದ ಕಾಗೆಯನ್ನು ಅತ್ಯಂತ ಕಾಳಜಿಯಿಂದ ರಕ್ಷಣೆ ಮಾಡಿದ್ದಾರೆ. ಅವರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆಗೆ ಅಭಿನಂದನೆಗಳು.@DCPTrWestBCP @blrcitytraffic pic.twitter.com/s4h9ev8Uc2
ಸುರೇಶ್ ಎರಡು ದಿನಗಳಿಗೆ ಹಿಂದೆ ರಾಜಾಜಿನಗರ ಪ್ರವೇಶ ದ್ವಾರದಲ್ಲಿ ಗಾಳಿಪಟದ ದಾರಕ್ಕೆ ಸಿಲುಕಿದ್ದ ಕಾಗೆಯೊಂದರ ಪರಿಸ್ಥಿತಿ ಗಮನಿಸಿ, ಮೊಬೈಲ್ ಟವರ್ ಏರಿ ಅದನ್ನು ರಕ್ಷಣೆ ಮಾಡಿದ್ದರು. ಈ ವಿಡಿಯೋಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರಾಜಾಜಿನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಹ ಹೆಡ್ ಕಾನ್ಸ್‌ಟೇಬಲ್ ಸುರೇಶ್ ಕಾರ್ಯವನ್ನು ಮೆಚ್ಚಿದ್ದಾರೆ. ಮೊಬೈಲ ಟವರ್‌ನಲ್ಲಿ ಸಿಲುಕಿದ್ದ ಕಾಗೆಯನ್ನು ಅತ್ಯಂತ ಕಾಳಜಿಯಿಂದ ರಕ್ಷಣೆ ಮಾಡಿದ ಅವರನ್ನು ಸನ್ಮಾನಿಸಿದ್ದಾರೆ.
ಗೃಹ ಸಚಿವರ ಟ್ವೀಟ್; ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಸುರೇಶ್ ಕಾರ್ಯವನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ, "ನಮ್ಮ ಸಂಚಾರಿ ಪೊಲೀಸರು ರಕ್ಷಣಾ ಕಾರ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ. ರಾಜಾಜಿನಗರದ ಟ್ರಾಫಿಕ್ ಪೊಲೀಸ್ ಶ್ರೀ ಸುರೇಶ್ ಅವರು, ಟವರ್‌ನಲ್ಲಿ ಸಿಲುಕಿದ್ದ ಕಾಗೆಯನ್ನು ಅತ್ಯಂತ ಕಾಳಜಿಯಿಂದ ರಕ್ಷಣೆ ಮಾಡಿದ್ದಾರೆ. ಅವರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಸುರೇಶ್ ಮೊಬೈಲ್ ಟವರ್‌ನಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಣೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ನೋಡಿದ ನೆಟ್ಟಿಗರು ಸುರೇಶ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 30ರಂದು ಮಾಡಿದ ಈ ಟ್ವೀಟ್ ಅನ್ನು ಇದುವರೆಗೂ 229.3k ಜನರು ವೀಕ್ಷಣೆ ಮಾಡಿದ್ದಾರೆ.
5,711 ಜನರು ಲೈಕ್ ಮಾಡಿದ್ದಾರೆ, 658 ಜನರು ರಿ ಟ್ವೀಟ್ ಮಾಡಿದ್ದಾರೆ. 64 ಜನರು ಕಮೆಂಟ್ ಮಾಡಿದ್ದಾರೆ.












Click it and Unblock the Notifications