ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಕೆರೆ ಕೆರೆಯಲ್ಲಿ ತೆಪ್ಪ ಮಗುಚಿ ಕೊಡಗಿನ ಮೂಲದ ಟೆಕ್ಕಿ ಕಣ್ಮರೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 08: ಸಿಲಿಕಾನ್ ಸಿಟಿಯ ರಾಮಮೂರ್ತಿನಗರದ ಕಲ್ಕೆರೆ ಕೆರೆಯಲ್ಲಿ ತೆಪ್ಪ ಮುಗುಚಿ ಟೆಕ್ಕಿಯೊಬ್ಬರು ಕಣ್ಮರೆಯಾಗಿರುವ ಘಟನೆ ನಡೆದಿದೆ.

ಕೊಡಗು ವಿರಾಜಪೇಟೆ ಮೂಲದ ಸಚಿನ್ ಕಣ್ಮರೆಯಾಗಿರುವ ಟೆಕ್ಕಿ. ಸಚಿನ್ ಮತ್ತು ಆರ್‌ಟಿ ನಗರದ ಉಲ್ಲಾಸ್ ಇಬ್ಬರೂ ಟೆಕ್ಕಿಗಳಾಗಿದ್ದು, ಶುಕ್ರವಾರ ರಾತ್ರಿ ಕಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದರು. ಮುಂಜಾನೆ ಸುಮಾರು 3 ಗಂಟೆಗೆ ಇಬ್ಬರು ಕೆಲ್ಕೆರೆ ಕೆರೆ ಏರಿ ಮೇಲೆ ಬಂದಿದ್ದರು. ಈ ವೇಳೆ ಕೆರೆ ಏರಿ ಮೇಲೆ ತೆಪ್ಪ ಕಂಡು ತೆಪ್ಪದಲ್ಲಿ ವಿಹಾರಕ್ಕೆ ಹೊರಟ್ಟಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಸಚಿನ್ ಕಣ್ಮರೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

 ಜಾರಿ ಬಿದ್ದ ತೆಪ್ಪದ ಹುಟ್ಟು

ಜಾರಿ ಬಿದ್ದ ತೆಪ್ಪದ ಹುಟ್ಟು

ತೆಪ್ಪದಲ್ಲಿ ಹೋಗುವಾಗ ಹುಟ್ಟು ಜಾರಿ ನೀರಿಗೆ ಬಿದ್ದಿದೆ. ಈ ವೇಳೆ ಕೈಯಲ್ಲಿ ತೆಪ್ಪ ನಡೆಸುವಾಗ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ಕೆರೆಗೆ ಬಿದ್ದಿದ್ದಾರೆ. ಟೆಕ್ಕಿ ಉಲ್ಲಾಸ ಈಜಿ ದಡ ಸೇರಿ ಬದುಕುಳಿದ್ದಾರೆ. ಆದರೆ ಸಚಿನ್ ಮಾತ್ರ ಎಲ್ಲೂ ಪತ್ತೆಯಾಗಿಲ್ಲ. ತಕ್ಷಣ ಉಲ್ಲಾಸ್ ತನ್ನ ಅಣ್ಣನಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬಂದು ಕಲ್ಕೆರೆ ಕೆರೆಯಲ್ಲಿ ಟೆಕ್ಕಿ ಸಚಿನ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಮಧ್ಯಾಹ್ನನವಾದರೂ ಸಚಿನ್ ಪತ್ತೆಯಾಗಿಲ್ಲ. ಉಲ್ಲಾಸ್ ಬ್ಯಾಗ್ ಹಾಕಿಕೊಂಡಿದ್ದರು. ಹೀಗಾಗಿ ಬ್ಯಾಗ್ ಹಾಕಿದ್ದರಿಂದ ಸೇಫ್ ಆಗಿ ಉಲ್ಲಾಸ್ ದಡ ಸೇರಿದ್ದಾರೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಚಿನ್ ಮಾನ್ಯತಾ ಟೆಕ್ ಪಾರ್ಕ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅಲ್ಲದೇ ಸಚಿನ್ ಗೆ ಈಜು ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಆದರೆ ತೆಪ್ಪ ಮಗುಚಿದಾಗ ಈಜಿ ದಡ ತಲುಪಲು ವಿಫಲರಾಗಿದ್ದಾರೆ.

ಸ್ನೇಹಿತರ ಜೊತೆ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕಸ್ನೇಹಿತರ ಜೊತೆ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

 ಅಪರೂಪಕ್ಕೆ ಗೆಳೆಯರು ಭೇಟಿ

ಅಪರೂಪಕ್ಕೆ ಗೆಳೆಯರು ಭೇಟಿ

"ರಾತ್ರಿ ಸುಮಾರು 12 ಗಂಟೆಗೆ ಬೀಟ್ ಬಂದಿದ್ದೆ. ಬಳಿಕ ಮತ್ತೆ 3 ಗಂಟೆಗೆ ಬೀಟ್ ಗೆ ಬಂದೆ. ಆದರೆ ಈ ವೇಳೆ ರಸ್ತೆ ಪಕ್ಕ ಕುಳಿತುಕೊಂಡು ಓರ್ವ ವ್ಯಕ್ತಿ ಅಳುತ್ತಿದ್ದರು. ಏನಾಯ್ತು ಅಂತ ಕೇಳಿದಾಗ ಕೆರೆಯಲ್ಲಿ ಮುಳುಗಿರುವ ಬಗ್ಗೆ ಹೇಳಿದರು. ರಾತ್ರಿ ಪಾರ್ಟಿ ಮಾಡಲು ಬಂದಿದ್ದಾರೆ. ಶುಕ್ರವಾರ ನಾನೊಬ್ಬನೇ ಇದ್ದೆ. ನಾನು ಬರುವ ವೇಳೆಗಾಗಲೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು. ಯಾರನ್ನೂ ಕೆರೆ ಒಳಗೆ ಬಿಡೋದಿಲ್ಲ. ಇವರು ಕುಡಿದು ಬಂದು ತೆಪ್ಪ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆರೆಯ ಸೆಕ್ಯೂರಿಟಿ ರಾಜೇಶ್ ಹೇಳಿದ್ದಾನೆ.

ಸಚಿನ್ ಮತ್ತು ಉಲ್ಲಾಸ್ ಇಬ್ಬರು ಅಪರೂಪಕ್ಕೆ ಭೇಟಿಯಾಗಿದ್ದರು. ಈ ಹಿಂದೆ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಇಬ್ಬರು ಬೇರೆ ಕಂಪನಿಗೆ ಕೆಲಸ ಬದಲಾಯಿಸಿದ್ದರು. ಸಚಿನ್ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಉದ್ಯೋಗದಲ್ಲಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಶುಕ್ರವಾರ ಇಬ್ಬರು ಭೇಟಿಯಾಗಿದ್ದರು. ಈ ವೇಳೆ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿಕೊಂಡು ಕೆರೆಯಲ್ಲಿ ವಿಹಾರ ಮಾಡುವುದಕ್ಕೆ ಇಬ್ಬರು ಬಂದಿದ್ದರು. ಆಗ ಸಚಿನ್ ಬಲವಂತ ಮಾಡಿ ಉಲ್ಲಾಸ್ ಕರೆತಂದಿದ್ದರು. ಈ ಹಿಂದೆ ಒಂದು ಬಾರಿ ಇದೇ ರೀತಿ ತೆಪ್ಪದಲ್ಲಿ ವಿಹಾರ ಹೋಗಿ ಬಂದಿದ್ದರು. ಅದೇ ರೀತಿ ರಾತ್ರಿ ತೆಪ್ಪದಲ್ಲಿ ವಿಹಾರ ಮಾಡಲು ಬಂದಿದ್ದರು. ಇಬ್ಬರು ಬಂದ ವೇಳೆ ಈ ಅವಘಡ ಸಂಭವಿಸಿದೆ.

 ಕೆರೆ ಮಧ್ಯದ ಐಲೆಂಡ್ ಗೆ ಹೊರಟಿದ್ದ ಗೆಳೆಯರು

ಕೆರೆ ಮಧ್ಯದ ಐಲೆಂಡ್ ಗೆ ಹೊರಟಿದ್ದ ಗೆಳೆಯರು

ಉಲ್ಲಾಸ್ ಹಾಗೂ ಸಚಿನ್ ಕೆರೆ ಮಧ್ಯದ ಐಲೆಂಡ್ ಗೆ ತೆರಳಲು ಮುಂದಾಗಿದ್ದರು. ಆದರೆ ಸಚಿನ್ ಹೆಚ್ಚು ಭಾರವಿದ್ದ. ಹೀಗಾಗಿ ಒಂದೇ ಕಡೆ ತೆಪ್ಪ ವಾಲಿತ್ತು. ಆದ್ದರಿಂದ ಕೆರೆ ಏರಿಯಿಂದ 100 ಮೀಟರ್ ತೆರಳುತ್ತಿದ್ದಂತೆ ತೆಪ್ಪ ಆಯ ತಪ್ಪಿದೆ. ಈ ವೇಳೆ ನೀರಿನಲ್ಲೇ ಹುಟ್ಟನ್ನು ಬಿಟ್ಟಿದ್ದಾರೆ. ಆಗ ತೆಪ್ಪದೊಳಗೆ ನೀರು ತುಂಬಿ ಮುಗುಚಿ ಬಿದ್ದಿತ್ತು. ಇಬ್ಬರು ನುರಿತ ಈಜಿಗಾರರಲ್ಲ. ಸಚಿನ್ ಹೆಚ್ಚು ಭಾರ ಹಾಗೂ ಮದ್ಯಪಾನ ಮಾಡಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗುತ್ತಿದೆ.

ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ

 ಮನೆಯವರಿಗೆ ಕರೆ ಮಾಡಿದ್ದ ಉಲ್ಲಾಸ್

ಮನೆಯವರಿಗೆ ಕರೆ ಮಾಡಿದ್ದ ಉಲ್ಲಾಸ್

ಉಲ್ಲಾಸ್ ಹಾಗೂ ಸಚಿನ್ ಇಬ್ಬರೂ ವರ್ಷದ ಹಿಂದೆ ಮದುವೆಯಾಗಿದ್ದರು. ಕಲ್ಕೆರೆಯ ಯುವತಿಯನ್ನು ಉಲ್ಲಾಸ್ ಮದುವೆಯಾಗಿದ್ದರು. ಅಲ್ಲದೇ ಉಲ್ಲಾಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯ ಸಹೋದರ ಕೃಷ್ಣಪ್ಪರ ಅಳಿಯರಾಗಿದ್ದಾರೆ. ಉಲ್ಲಾಸ್ ಹೆಂಡತಿ, ಉಲ್ಲಾಸ್ ಮತ್ತು ಅವರ ಸ್ನೇಹಿತ ಕೆರೆ ಬಳಿ ಹೋಗಿದ್ದರಂತೆ. ತೆಪ್ಪ ಮಗುಚಿ ಸಚಿನ್ ಕಾಣಿಸುತ್ತಿಲ್ಲ ಎಂದು ಅಪ್ಪನ ಬಳಿ ವಿಚಾರ ಹೇಳಿದ್ದಾರೆ. ಕೂಡಲೇ ಉಲ್ಲಾಸ್ ಮಾವ ಕೃಷ್ಣಪ್ಪ ಮೀನುಗಾರರಿಗೆ ಫೋನ್ ಮಾಡಿ ಕೆರೆ ಬಳಿ ಬಂದಿದ್ದಾರೆ. ಕಾರಿನಲ್ಲಿ ಇಡೀ ಪ್ರದೇಶವನ್ನು ಒಂದು ರೌಂಡ್ ಬಂದಿದ್ದಾರೆ. ಸಚಿನ್ ಕಾಣದಾದಾಗ ಅವರ ಪತ್ನಿ ಮತ್ತು ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ.

English summary
Kodagu origin Techie disappeared at Kalkare Lake in Ramamurthy Nagar of bengaluru. Techie Sachin is from virajapete of Kodagu,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X