ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರಿಗೆ ನೌಕರರ ಮುಷ್ಕರ; ನಷ್ಟಕ್ಕೆಲ್ಲ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ ಎಂದ ಸಿಎಂ

|
Google Oneindia Kannada News

ಬೆಂಗಳೂರು, ಡಿಸೆಂಬರ್ 12: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟ ಎರಡನೇ ದಿನವಾದ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಷ್ಕರದ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, ಸಾರಿಗೆ ಬಸ್ಸಿಗೆ ಕಲ್ಲು ತೂರಾಟ ಮಾಡುವ ಮೂಲಕ ಆಸ್ತಿಪಾಸ್ತಿ ನಷ್ಟ ಉಂಟಾಗಲು ಕೋಡಿಹಳ್ಳಿ ಚಂದ್ರಶೇಖರ್ ಅವರೇ ಕಾರಣ ಎಂದಿದ್ದಾರೆ.

ಮುಷ್ಕರದ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ, ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಅವರು ಕೂಡ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 ಸಾರಿಗೆ ನೌಕರರ ಮುಷ್ಕರ; ಸಭೆ ನಂತರ ಗೃಹ ಸಚಿವರು ಹೇಳಿದ್ದೇನು? ಸಾರಿಗೆ ನೌಕರರ ಮುಷ್ಕರ; ಸಭೆ ನಂತರ ಗೃಹ ಸಚಿವರು ಹೇಳಿದ್ದೇನು?

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಆರೋಪಿಸಿ, ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಹಾಗೂ ರಾಜ್ಯದ ವಿವಿಧೆಡೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ, ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿದ್ದಾರೆ ಎಂದಿದ್ದಾರೆ.

Kodihalli Chandrashekar is the Person Behind BMTC and KSRTC Employees Strike: CM Yediyurappa

ಇದೇ ಸಂದರ್ಭ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ಕೋಡಿಹಳ್ಳಿ ಚಂದ್ರಶೇಖರ್ ಲಘುವಾಗಿ ಮಾತನಾಡಿರುವುದು ಖಂಡನೀಯವಾಗಿದೆ ಎಂದಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮನವಿ ಮಾಡಿದ್ದಾರೆ.

English summary
Kodihalli Chandrashekar is the Person Behind BMTC and KSRTC Employees Strike alleges CM Yediyurappa,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X