ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೆಪಿ ನಂಜುಂಡಿ ನೇಮಕ
ಬೆಂಗಳೂರು, ಜುಲೈ 02 : ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
2018ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಕರ್ಮ ಸಮೂದಾಯದ ಮುಖಂಡ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.

ಇಂದು (ಭಾನುವಾರ) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಗೌರವಿಸಲಾಯಿತು.
ನಂಜುಂಡಿಯವರಿಗೆ ಶೀಘ್ರದಲ್ಲಿ ಉತ್ತಮ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇಂದು ಯಡಿಯೂರಪ್ಪ, ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಕೊಟ್ಟು ಭರವಸೆ ಈಡೇರಿಸಿದ್ದಾರೆ.












Click it and Unblock the Notifications