ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆಗೆ ಅಧಿಕೃತ ಆಹ್ವಾನ ನೀಡಿದ ಕೆಪಿಸಿಸಿ

|
Google Oneindia Kannada News

Recommended Video

lok sabha elections 2019: ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆಗೆ ಅಧಿಕೃತ ಆಹ್ವಾನ ನೀಡಿದ ಕೆಪಿಸಿಸಿ

ಬೆಂಗಳೂರು, ಮಾರ್ಚ್ 18: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದಲೇ ಸ್ಪರ್ಧಿಸುವಂತೆ ಕೆಪಿಸಿಸಿ ಅಧಿಕೃತ ಆಹ್ವಾನ ನೀಡಿದೆ.

ಕಳೆದ ಒಂದು ವಾರದಿಂದ ರಾಹುಲ್ ಗಾಂಧಿ ಸ್ಪರ್ಧೆ ಕುರಿತಂತೆ ಕರ್ನಾಟಕದಲ್ಲಿ ಸಾಕಷ್ಟು ಗಾಳಿಸುದ್ದಿಗಳು ಹರಿದಾಡುತ್ತಿತ್ತು. ಇದಕ್ಕೆ ಪೂರಕವೆನ್ನುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಕರ್ನಾಟಕದಿಂದ ಸ್ಪರ್ಧಿಸುವಂತೆ ಟ್ವಿಟ್ಟರ್‌ನಲ್ಲಿ ಆಹ್ವಾನ ನೀಡಿದ್ದರು.

ಇಂದು ಕಲಬುರಗಿಯಲ್ಲಿ ರಾಹುಲ್ ಗಾಂಧಿ ಪರಿವರ್ತನಾ ಸಮಾವೇಶಇಂದು ಕಲಬುರಗಿಯಲ್ಲಿ ರಾಹುಲ್ ಗಾಂಧಿ ಪರಿವರ್ತನಾ ಸಮಾವೇಶ

ಈಗ ರಾಹುಲ್ ಗಾಂಧಿಗೆ ಅಧಿಕೃತ ಪತ್ರ ಬರೆದಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರ್ನಾಟಕದಿಂದಲೇ ಯಾವದಾದರೊಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ ಕೂಡ ಸ್ಪರ್ಧಿಸಿರುವುದನ್ನು ಉಲ್ಲೇಖಿಸಿ ಈ ಆಹ್ವಾನವನ್ನು ನೀಡಲಾಗಿದೆ.

KPCC all set to formally invite RahulGandhi to contest from Karnataka

ಕರ್ನಾಟಕ ಸಂಕಷ್ಟದಲ್ಲಿದ್ದಾಗ ಕಾಂಗ್ರೆಸ್ ಪಕ್ಷವು ಜನರ ಬೆನ್ನೆಲುಬಾಗಿ ನಿಂತಿತ್ತು. ಇಡೀ ದೇಶದಲ್ಲೇ ನಮ್ಮ ಪಕ್ಷ ಪ್ರಬಲ ಪಕ್ಷವಾಗಿದೆ ಹೀಗಾಗಿ ಕರ್ನಾಟಕದಿಂದಲೇ ನೀವು ಸ್ಪರ್ಧಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ ನಾಳೆಯಿಂದ ಲೋಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ ಕರ್ನಾಟಕದಲ್ಲಿ ನಾಳೆಯಿಂದ ಲೋಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ ಸಿದ್ಧತೆ ಭರದಿಂದ ಸಾಗಿದೆ. ಹಾವೇರಿ ಬಳಿಕ ರಾಹುಲ್ ಗಾಂಧಿ ಪರಿವರ್ತನಾ ಸಮಾವೇಶ ಇಂದು ಕಲಬುರಗಿಯಲ್ಲಿ ನಡೆಯಲಿದೆ.

ಬೆಳಗ್ಗೆ 11ಗಂಟೆಗೆ ಕಲಬುರಗಿಯ ಎನ್‌ವಿ ಆಟದ ಮೈದಾನದಲ್ಲಿ ನಡೆವ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೋಮವಾರ ನಡೆಯಲಿರುವ ಕಲಬುರಗಿ ಸಮಾವೇಶ ಮಹತ್ವ ಪಡೆದುಕೊಂಡಿದೆ.

English summary
Karnataka Pradesh Congress committee formally invites AICC president Rahul Gandhi contest election from Karnataka. KPCC urges that his candidature will help the beat NDA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X