ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿಶಾ ರವಿ ಬಂಧನ ಖಂಡನೀಯ ಎಂದ ಡಿ.ಕೆ. ಶಿವಕುಮಾರ್!

|
Google Oneindia Kannada News

ಬೆಂಗಳೂರು, ಫೆ. 16: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿವೆ. ಯುವಕರ ಧ್ವನಿ ಈ ದೇಶದ ಧ್ವನಿ. ಆದರೆ ಈ ಧ್ವನಿ ದಮನಕ್ಕೆ ಸರ್ಕಾರಗಳು ಮುಂದಾಗಿವೆ. ಯುವಕರು ತಮ್ಮ ಹಕ್ಕು ರಕ್ಷಣೆಗೆ ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದಿಶಾ ರವಿ ಬಂಧನದ ಹಿನ್ನೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ದಿಶಾ ರವಿ ಅವರ ಬಂಧನದಿಂದ ಇಡೀ ದೇಶದ ಯುವ ಸಮುದಾಯ ದಿಗ್ಭ್ರಮೆಗೆ ಒಳಗಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ್ಯ ಪ್ರಮುಖವಾದುದು. ನಮ್ಮ ಸಂವಿಧಾನ ನಮಗೆ ಈ ಸ್ವಾತಂತ್ರ್ಯ ನೀಡಿದೆ. ಯುವಕರು ತಮ್ಮ ಸ್ವಾತಂತ್ರ್ಯ ವ್ಯಕ್ತಪಡಿಸದಂತೆ ಬಾಯಿ ಮುಚ್ಚಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದಿದ್ದಾರೆ.

ಕರ್ನಾಟಕದವರಾದ ದಿಶಾ ರವಿ ಅವರ ಬಂಧನವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ನಾನು ಖಂಡಿಸುತ್ತೇನೆ. ಇಡೀ ಯುವ ಸಮುದಾಯಕ್ಕೆ ಇದೊಂದು ಎಚ್ಚರಿಕೆ ಗಂಟೆ. ಎಲ್ಲರ ಅಭಿಪ್ರಾಯ, ಅನಿಸಿಕೆಗಳನ್ನು ಮಟ್ಟಹಾಕಲು ಸರ್ಕಾರಗಳು ಪ್ರಯತ್ನಿಸುತ್ತಿವೆ. ಇದರ ವಿರುದ್ಧ ನಾವು ಪ್ರತಿಭಟನೆ ಮಾಡಬೇಕಿರುವುದು ಅನಿವಾರ್ಯ.

KPCC President D.K. Shivakumar is condemned Disha Ravis Arrest

ವಾಕ್ ಸ್ವಾತಂತ್ರ್ಯ ನಿಮ್ಮ ಹಕ್ಕು. ಭಾರತದಲ್ಲಿ ನಮ್ಮ ದೊಡ್ಡ ಆಸ್ತಿ ಎಂದರೆ ಅದು ನಮ್ಮ ಸ್ವಾತಂತ್ರ್ಯದ ಹಕ್ಕು. ಈ ಹಕ್ಕು ಉಳಿಸಿಕೊಳ್ಳಲು ನಾವು ಹೋರಾಟ ಮಾಡಬೇಕಿದೆ ಎಂದು ಯುವಕರಿಗೆ ಸಂದೇಶ ರವಾನಿಸುತ್ತೇನೆ. ರೈತರ ಹೋರಾಟ, ಸಿಎಎ, ಎನ್ಆರ್ಸಿ ವಿರೋಧದ ಧ್ವನಿಯನ್ನು ಮೊಟುಕುಗೊಳಿಸಲಾಯಿತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Recommended Video

ದೇಶದ್ರೋಹಿಗಳ ಬೆಂಬಲಿಸುವ ಸಂಘಟನೆಗಳಿಗೆ ಬೀದಿಯೇ ಗತಿ-ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ್ | Oneindia Kannada

ಸರ್ಕಾರಕ್ಕೆ ನಾಯಕರುಗಳು, ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಘಟನೆಗಳು, ಎನ್‌ಜಿಒಗಳು, ಮಾಧ್ಯಮಗಳು ಸೇರಿದಂತೆ ಯಾರು ಬೇಕಾದರೂ ಮಾರ್ಗದರ್ಶನ ನೀಡಬಹುದು. ಇವರ ಬಾಯನ್ನು ಮುಚ್ಚಿಸಲು ಸಾಧ್ಯವಿಲ್ಲ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಎಲ್ಲ ಯುವಕರು ಎದ್ದೇಳಬೇಕು, ಮಾಧ್ಯಮ ಸ್ನೇಹಿತರು ಕೂಡ ನಿಮ್ಮ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಬೇಕು. ಇದು ನಿಮ್ಮ ಜವಾಬ್ದಾರಿ ಎಂದು ಮನವಿ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

English summary
KPCC President D.K. Shivakumar is condemned Disha Ravi's Arrest. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X