• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯುವತಿ ಹೇಳಿಕೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ

|

ಬೆಂಗಳೂರು, ಮಾರ್ಚ್ 27: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರತಿ ದಿನ ಒಂದೊಂದು ತಿರುವು ಪಡೆಯುತ್ತಿದೆ.

ಶುಕ್ರವಾರ ವೈರಲ್ ಆಗಿರುವ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸಿಡಿ ಯುವತಿಯ ಆಡಿಯೋ ವೈರಲ್: ಡಿ.ಕೆ ಶಿವಕುಮಾರ್ ಹೆಸರು ಪ್ರಸ್ತಾಪ; ಆಡಿಯೋದಲ್ಲಿ ಏನಿದೆ?

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಆ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ಆದರೆ ನನ್ನನ್ನು ಭೇಟಿಯಾಗಿಲ್ಲ ಎಂದರು.

ನೊಂದವರಿಗೆ ಸಹಾಯ ಮಾಡುವುದು ನನ್ನ ಕರ್ತವ್ಯ, ಸಹಾಯ ಕೇಳಿಕೊಂಡು ದಿನಾಲೂ ಹತ್ತು ಜನ ನನ್ನ ಮನೆ ಹತ್ತಿರ ಬರ್ತಾರೆ ಎಂದು ಹೇಳಿದ ಡಿ.ಕೆ ಶಿವಕುಮಾರ್, ಯುವತಿಯ ಆಡಿಯೋ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನರೇಶ್ ಗೌಡ ನನಗೆ ಬೇಕಾದ ಹುಡುಗ, ಪರಿಚಯಸ್ಥನಾಗಿದ್ದಾನೆ. ನರೇಶ್ ಮನೆಗೆ ಹಲವು ಬಾರಿ ಹೋಗಿ ಬಂದಿದ್ದೇನೆ. ನರೇಶ್ ಕೆಲವೊಂದು ವಿಚಾರಗಳನ್ನು ನನ್ನೊಂದಿಗೆ ಹಂಚಿಕೊಂಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

   ಇಬ್ಬರ ರಾಜಕೀಯ ಭವಿಷ್ಯಕ್ಕೆ ಖಳನಾಯಕಿ ಆಗ್ತಾರ ಸಿಡಿ ಗರ್ಲ್ | Oneindia Kannada

   ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ, ನನ್ನ ಸ್ನೇಹಿತನಿದ್ದಾನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಬಗ್ಗೆ ಜಾರಕಿಹೊಳಿ ಅನುಕಂಪಕ್ಕೆ ಸಂತೋಷ. ರಾಜಕಾರಣದಲ್ಲಿ ಇದೆಲ್ಲ ಸಹಜ ಎಂದು ಸಿಡಿ ಯುವತಿ ಹೇಳಿಕೆ ಬಗ್ಗೆ ಡಿ.ಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದರು.

   English summary
   KPCC president DK Shivakumar's name was mentioned in the CD girl viral audio. DK Shivakumar first response to that.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X