ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.ಕೆ. ಶಿವಕುಮಾರ್ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

|
Google Oneindia Kannada News

ಬೆಂಗಳೂರು, ಜೂನ್ 04: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಣಿಸುತ್ತಿದ್ದ ಸಂದರ್ಭ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶವಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಕೆಲ ಹೊತ್ತಿಗೂ ಮೊದಲು ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ ಎಂದು ತಿಳಿದುಬಂದಿದೆ. ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಅವರು ಬೆಂಗಳೂರಿಗೆ ವಾಪಸಾಗುತ್ತಿದ್ದರು.

ಏರ್ ಫ್ರಾನ್ಸ್ ವಿಮಾನದಲ್ಲಿ ಭಾರತೀಯನ ಕಿರಿಕ್: ಬಲ್ಗೇರಿಯಾದಲ್ಲಿ ತುರ್ತು ಭೂಸ್ಪರ್ಶಏರ್ ಫ್ರಾನ್ಸ್ ವಿಮಾನದಲ್ಲಿ ಭಾರತೀಯನ ಕಿರಿಕ್: ಬಲ್ಗೇರಿಯಾದಲ್ಲಿ ತುರ್ತು ಭೂಸ್ಪರ್ಶ

ವಿಪರೀತ ಮಳೆಯ ಕಾರಣ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಸಿಗಲಿಲ್ಲ. ಹೀಗಾಗಿ ಟಿ. ಬೇಗೂರು ಬಳಿ 4 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಧರೆಗಿಳಿಯಿತು. ಅಲ್ಲಿಂದ ರಸ್ತೆ ಮಾರ್ಗವಾಗಿ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ರಾಜಭವನದತ್ತ ಹೊರಟಿರುವುದಾಗಿ ತಿಳಿದುಬಂದಿದೆ.

KPCC President DK Shivakumar Helicopter Emergency Landing In Nelamangala Due To Rain

ಅಲ್ಲಿ ಕಾಂಗ್ರೆಸ್ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಲಿದೆ. ರಾಜ್ಯಪಾಲರ ಭೇಟಿ ಪೂರ್ವನಿಯೋಜಿತವಾಗಿತ್ತು ಎನ್ನಲಾಗಿದೆ.

English summary
KPCC President DK Shivakumar Helicopter Emergency Landing in Nelamangala due to rain. He was travelling from davangere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X