• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಆಂತರಿಕ ಜಗಳ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದಿಷ್ಟು

|

ಬೆಂಗಳೂರು, ಮೇ 29: ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸೃಷ್ಟಿಯಾಗಿದೆ. ಅತೃಪ್ತ ಶಾಸಕರು ಗೌಪ್ಯವಾಗಿ ಸಭೆ ಸೇರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಹಿನ್ನೆಲೆ ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗೆ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

   ನರಕಯಾತನೆ ಅನುಭವಿಸ್ತಾಯಿದಾರೆ ಕ್ವಾರಂಟೈನ್ ನಿವಾಸಿಗಳು | Oneindia Kannada

   ಕೊರೊನಾ ವೈರಸ್ ವಿರುದ್ಧ ಹೋರಾಡಬೇಕಾಗಿರುವ ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಸರ್ಕಾರಕ್ಕೆ ಮುಳುವಾಗುತ್ತಾ ಎಂಬ ಪ್ರಶ್ನೆಗೆ ಕಾರಣವಾಗಿದೆ.

   ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯ ಸನಿಹದಲ್ಲಿರುವ ಸಂತೋಷ್ ಯಾರು?ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯ ಸನಿಹದಲ್ಲಿರುವ ಸಂತೋಷ್ ಯಾರು?

   ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಆಂತರಿಕ ಜಗಳದ ಕುರಿತು ಮಾತನಾಡಿದ ಡಿಕೆಶಿ ''ಬಿಜೆಪಿಯ ಆಂತರಿಕ‌ ಬೆಳವಣಿಗೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಇಂದು ಕಿತ್ತಾಡುತ್ತಾರೆ ನಾಳೆ ಎಲ್ಲರೂ ಒಂದಾಗುತ್ತಾರೆ. ಅವರ ವಿಚಾರಗಳೆಲ್ಲಾ ನನಗೆ ತಿಳಿದಿದೆ'' ಎಂದಿದ್ದಾರೆ.

   ''ಕೊರೋನಾ ತುರ್ತು ಪರಿಸ್ಥಿತಿಯಲ್ಲಿ ಬಿಜೆಪಿಯವರು ಮಾಡುತ್ತಿರುವುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬಿಜೆಪಿಯ ಯಾವ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ಬಿಜೆಪಿಯ ಪಕ್ಷದ ಆಂತರಿಕೆ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ'' ಎಂದು ಸದಾಶಿವ ನಗರದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

   "ಬಿಜೆಪಿ ಶಾಸಕರ ರಹಸ್ಯ ಮೀಟಿಂಗ್‌; ಮಾಧ್ಯಮಗಳ ತಪ್ಪು ಕಲ್ಪನೆ'

   ಇದಕ್ಕು ಮುಂಚೆ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಾದ ಬಸನಗೌಡ ಪಾಟೀಲ್, ರಾಜುಗೌಡ, ದತ್ತಾತ್ರೇಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಗೌಪ್ಯ ಸಭೆ ಸೇರಿದ್ದರು ಎನ್ನಲಾಗಿದೆ. ರಾಜ್ಯಸಭೆ ಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.

   English summary
   I don't comment on the internal development of the BJP said KPCC President DK Shivakumar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X