ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು, ಆ. 31: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆ. 24 ರಂದು ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು.
Recommended Video
ಆಸ್ಪತ್ರೆಗೆ ದಾಖಲಾದ ಬಳಿಕ ಮತ್ತೆ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಡಿಕೆಶಿ ಅವರು ಒಳಗಾಗಿದ್ದರು. ಎರಡೂ ಬಾರಿಯೂ ಕೋವಿಡ್ ಸೋಂಕು ನೆಗೆಟಿವ್ ಬಂದಿದೆ. ಹೀಗಾಗಿ 7 ದಿನಗಳ ಬಳಿಕ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ಸದಾಶಿವನಗರದ ತಮ್ಮ ನಿವಾಸಕ್ಕೆ ಶಿವಕುಮಾರ್ ಅವರು ಹಿಂದಿರುಗಿದ್ದು, ಅಲ್ಲಿಯೆ ಮತ್ತೊಂದು ವಾರ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್ ಅವರು, ಕಳೆದ ಒಂದು ವಾರದ ಹಿಂದೆ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆ ವೈದ್ಯರು ಅತ್ಯುತ್ತಮ ಚಿಕಿತ್ಸೆ ಕೊಟ್ಟಿದ್ದಾರೆ. ಆಸ್ಪತ್ರೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ರಾಜಕಾರಣಿಗಳು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚೇತರಿಸಿಕೊಂಡಿದ್ದು, ಸೋಂಕಿನ ಬಗ್ಗೆ ಅನಗತ್ಯ ಆತಂಕ ಬೇಡ ಎಂದಿದ್ದಾರೆ. ಜೊತೆಗೆ ರಾಜ್ಯದ ಜನರು ಸೂಕ್ತ ಮುಂಜಾಗ್ರತೆ ವಹಿಸುವಂತೆ ಡಿಕೆಶಿ ಅವರು ಮನವಿ ಮಾಡಿಕೊಂಡಿದ್ದಾರೆ.












Click it and Unblock the Notifications