ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ

|
Google Oneindia Kannada News

ಬೆಂಗಳೂರು, ಆ. 31: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆ. 24 ರಂದು ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು.

Recommended Video

DK Shivakumar, ಕೊರೊನ ಗೆದ್ದು ಬಂದ ಕನಕಪುರ ಬಂಡೆ | Oneindia Kannada

ಆಸ್ಪತ್ರೆಗೆ ದಾಖಲಾದ ಬಳಿಕ ಮತ್ತೆ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಡಿಕೆಶಿ ಅವರು ಒಳಗಾಗಿದ್ದರು. ಎರಡೂ ಬಾರಿಯೂ ಕೋವಿಡ್ ಸೋಂಕು ನೆಗೆಟಿವ್ ಬಂದಿದೆ. ಹೀಗಾಗಿ 7 ದಿನಗಳ ಬಳಿಕ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ಸದಾಶಿವನಗರದ ತಮ್ಮ ನಿವಾಸಕ್ಕೆ ಶಿವಕುಮಾರ್ ಅವರು ಹಿಂದಿರುಗಿದ್ದು, ಅಲ್ಲಿಯೆ ಮತ್ತೊಂದು ವಾರ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

KPCC President DK Shivakumar Recovers from Coronavirus, Discharged from Hospital

ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು

ಇದೇ ಸಂದರ್ಭದಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್ ಅವರು, ಕಳೆದ ಒಂದು ವಾರದ ಹಿಂದೆ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆ ವೈದ್ಯರು ಅತ್ಯುತ್ತಮ ಚಿಕಿತ್ಸೆ ಕೊಟ್ಟಿದ್ದಾರೆ. ಆಸ್ಪತ್ರೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

KPCC President DK Shivakumar Recovers from Coronavirus, Discharged from Hospital

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ರಾಜಕಾರಣಿಗಳು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚೇತರಿಸಿಕೊಂಡಿದ್ದು, ಸೋಂಕಿನ ಬಗ್ಗೆ ಅನಗತ್ಯ ಆತಂಕ ಬೇಡ ಎಂದಿದ್ದಾರೆ. ಜೊತೆಗೆ ರಾಜ್ಯದ ಜನರು ಸೂಕ್ತ ಮುಂಜಾಗ್ರತೆ ವಹಿಸುವಂತೆ ಡಿಕೆಶಿ ಅವರು ಮನವಿ ಮಾಡಿಕೊಂಡಿದ್ದಾರೆ.

English summary
KPCC President DK Shivakumar Recovers from Coronavirus, Discharged from Hospital, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X