• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಮೇಯರ್ ಚುನಾವಣೆ ಕುರಿತು ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ!

|

ಬೆಂಗಳೂರು, ಫೆ. 24: ಮೈಸೂರು ಮೇಯರ್ ವಿಚಾರದಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲು ಜೆಡಿಎಸ್ ಮುಂದಾಗಿದೆ. ಇದೇ ವಿಚಾರವಾಗಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಪರೀಕ್ಷ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸ್ಥಳೀಯ ನಾಯಕರ ನಿರ್ಧಾರ ಎಂದಿದ್ದರು. ಈ ಮಧ್ಯೆ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು, ಮೈಸೂರು ಪಾಲಿಕೆಯಲ್ಲಿ ಅಧಿಕಾರ ಹಿಡಿದಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆಗೆ ಸಖ್ಯ ಬೆಳೆಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ 2 ವರ್ಷ ಹಾಗೂ ಜೆಡಿಎಸ್ ಪಕ್ಷಕ್ಕೆ ನಂತರದ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. ಆ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿದೆ ಎಂದು ನಾವು ಭಾವಿಸಿದ್ದೇವೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಈಗಲೇ ನಾನು ಏನು ಹೇಳಲ್ಲ!

ಈಗಲೇ ನಾನು ಏನು ಹೇಳಲ್ಲ!

ಮೈತ್ರಿ ಮುರಿಯುವ ವಿಚಾರವಾಗಿ ಯಾರು ಏನು ಹೇಳಿದ್ದಾರೆ, ಏನು ಮಾಡಿದ್ದಾರೆ ಎಂಬುದನ್ನು ನಾನು ಪ್ರತ್ಯಕ್ಷವಾಗಿ ನೋಡಿ ತಿಳಿಯುವವರೆಗೂ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಯಾರ ಜತೆ ಬೇಕಾದರೂ ಮಾತನಾಡುತ್ತೇನೆ. ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ ಎಂದು ಇದೇ ಸಂದರ್ಭದಲ್ಲಿ ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗ

ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆ

ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆ

ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ್ಯ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ. ಸ್ವತಂತ್ರ್ಯ ಅಭ್ಯರ್ಥಿಯು ಸಿದ್ಧಾಂತದ ಆಧಾರದ ಮೇಲೆ ಸಹ ಸದಸ್ಯನಾಗಿ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದು. ಅವರ ಕಾರ್ಯಕರ್ತರು ಪಕ್ಷ ಸೇರಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಶಾಸಕ ಶರತ್ ಬಚ್ಚೇಗೌಡ ಅವರು ಯಾವಾಗ ಪಕ್ಷ ಸೇರುತ್ತಾರೆ ಎಂಬುದನ್ನು ಡಿಕೆಶಿ ಸ್ಪಷ್ಟಪಡಿಸಿಲ್ಲ.

ಚಿಕ್ಕಬಳ್ಳಾಪುರ ಸ್ಫೋಟ

ಚಿಕ್ಕಬಳ್ಳಾಪುರ ಸ್ಫೋಟ

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದ ಸ್ಥಳಕ್ಕೆ ನಮ್ಮ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರೂ ಕೂಡ ಭೇಟಿ ನೀಡಲಿದ್ದಾರೆ. ಘಟನೆಗೆ ಸರ್ಕಾರವೇ ನೇರ ಹೊಣೆ. ಸರ್ಕಾರದ ನಿರ್ಲಕ್ಷದಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಅಕ್ರಮ ಗಣಿಗಾರಿಕೆ ತಡೆಯಲು ಬಿಜೆಪಿ ಸರ್ಕಾರ ಮುಂದಾಗಬೇಕು ಎಂದು ಡಿಕೆಶಿ ಹೇಳಿದ್ದಾರೆ.

  ಮತ್ತೆ ಜನಸಾಮಾನ್ಯರಿಗೆ ಅನಿಲಾಘಾತ- ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಳ..! | Oneindia Kannada
  ಕಾಂಗ್ರೆಸ್ ಪಾದಯಾತ್ರೆ

  ಕಾಂಗ್ರೆಸ್ ಪಾದಯಾತ್ರೆ

  ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಪಾದಯಾತ್ರೆ ಮಾಡಲು ತೀರ್ಮಾನ ಮಾಡಿದ್ದೇವೆ. ಜೊತೆಗೆ ಎರಡೂ ಸರ್ಕಾರಗಳ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕಿದೆ. ಹೀಗಾಗಿ ಪಾದಯಾತ್ರೆ ವಿಚಾರವಾಗಿ ನಾಳೆ ಸಭೆ ನಡೆಸಲಿದ್ದು, ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಡಿಕೆಶಿ ಹೇಳಿಕೆ ನೀಡಿದ್ದಾರೆ.

  English summary
  Regarding Mysore mayor Post Congress alliance with the JDS. It was decided that the Congress party would be 2 years and the JDS party the next 3 years KPCC President DK Sivakumar said in a statement in Bengaluru. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X