• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

''ಸರ್ಕಾರದ ಕೊರೊನಾ ಅವ್ಯವಹಾರ ನೋಡಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ''

|

ಬೆಂಗಳೂರು, ಏಪ್ರಿಲ್ 30: 'ಸರ್ಕಾರಕ್ಕೆ ನೀಡಿದ್ದ "ಸಹಕಾರ ಕಾಲಾವಕಾಶ" ಮುಗಿದಿದೆ. ಬಡವರಿಗೆ ಅಕ್ಕಿಯಿಂದ ಹಿಡಿದು, ಹಾಲು, ತರಕಾರಿ, ದಿನಸಿ ಹಂಚಿಕೆವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನೇನಿದ್ದರೂ ನಾವು ಸರ್ಕಾರದ ವೈಫಲ್ಯಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು, ಶ್ರಮಿಕ ವರ್ಗದವರು ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರೋಪಾಯ ಕಂಡು ಹಿಡಿಯಲು ವಿಧಾನಸೌಧದಲ್ಲಿ ಗುರುವಾರ ಕರೆದಿದ್ದ ಪ್ರತಿಪಕ್ಷಗಳು, ರೈತರು ಮತ್ತಿತರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷನಾಗಿದ್ದೇನೆ ಅಂತಾ ತೋರಿಸಲಿಕ್ಕೆ ಮಾತ್ರ ಡಿಕೆಶಿ ಆರೋಪಗಳು'

'ಕಳೆದ ಒಂದು ತಿಂಗಳಿಂದ ಸಂಕಷ್ಟದ ಸಮಯದಲ್ಲಿ ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ರಾಜಕಾರಣ ಮಾಡಬಾರದು ಹಾಗೂ ಮಾನವೀಯತೆ ದೃಷ್ಟಿಯಿಂದ ನಾವು ಸರ್ಕಾರದ ಜತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರ್ಕಾರ ಏನು ಮಾಡಿದೆ ಎಂಬುದನ್ನು ನೀವೆಲ್ಲ ನೋಡಿದ್ದೀರಿ. ಸಚಿವರುಗಳ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕೂರಲು ಇನ್ನು ಸಾಧ್ಯವಿಲ್ಲ' ಎಂದರು.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ

ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ

'ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜನರಿಗೆ ಏನು ಆಶ್ವಾಸನೆ ಕೊಟ್ಟರೋ ಅದರಲ್ಲಿ ಒಂದೇ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ.20 ರಷ್ಟು ಕೆಲಸ ಆಗಿರೋದು ಬಿಟ್ಟರೆ, ಆರೋಗ್ಯ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ. ಇದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದರು.

ರಾಜಕಾರಣವನ್ನು ದೂರವಿಟ್ಟೆವು

ರಾಜಕಾರಣವನ್ನು ದೂರವಿಟ್ಟೆವು

ಕೊರೊನಾ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇರಲಿ, ಜೆಡಿಎಸ್ ಇರಲಿ ಇತರೆ ಸಂಘಟನೆಗಳಿರಲಿ ಎಲ್ಲವೂ ಸ್ವಹಿತಾಸಕ್ತಿ ಮರೆತು ರಸ್ತೆಗಿಳಿದು ಜನರಿಗೆ ಸಹಾಯ ಮಾಡಿವೆ. ಶಕ್ತಿ ಮೀರಿ ಜನಪರವಾಗಿ ಶ್ರಮಿಸಿವೆ. ಈ ವಿಚಾರದಲ್ಲಿ ನಾವು ರಾಜಕಾರಣವನ್ನು ದೂರವಿಟ್ಟೆವು. ಆದರೆ ಈಗ ಸಮಯ ಮೀರುತ್ತಿದೆ. ಇನ್ನು ನಾವು ಸುಮ್ಮನೇ ಕೂತರೆ ಜನರಿಗೆ, ನಮ್ಮ ಜವಾಬ್ದಾರಿಗೆ ಮೋಸ ಮಾಡಿದಂತಾಗುತ್ತದೆ. ಹಾಲು ಕೊಡ್ರಿ ಅಂದ್ರೆ ಅದರಲ್ಲೂ ವ್ಯಾಪಾರ. ಅಕ್ಕಿ ಕೊಡುವುದರಲ್ಲೂ ಅವ್ಯವಹಾರ. ಈವರೆಗೂ ಸರ್ಕಾರ ಒಂದೇ ಒಂದು ಕಡೆ ತರಕಾರಿಗಳನ್ನು ಖರೀದಿ ಮಾಡಿರುವ ದಾಖಲೆ ನಿಮ್ಮ ಬಳಿ ಇದ್ದರೆ ಕೊಡಿ. ಅವರು ಖರೀದಿಸಿಲ್ಲ ಅಂದ್ರೆ ಹೊರ ರಾಜ್ಯಗಳಿಗೆ ಕಳುಹಿಸಿದ್ದಾರಾ? ಅದಕ್ಕೆ ಅವಕಾಶ ಸಿಕ್ಕಿದ್ಯಾ? ಇದ್ಯಾವುದರ ಬಗ್ಗೆಯೂ ಮಾಹಿತಿ ಇಲ್ಲ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲ ವಿಚಾರದಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ

ಎಲ್ಲ ವಿಚಾರದಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ

'ವಾಹನ ಸಾಲ ಪಡೆದಿರುವವರಿಗೆ ಕಂತಿನ ವಿನಾಯಿತಿ, ಬಡ್ಡಿ ಮನ್ನಾ ಅಥವಾ ವಿಮೆ ಕಂತು ತಡವಾಗಿ ಕಟ್ಟಲು ಅವಕಾಶ ಕಲ್ಪಿಸಲಾಗಿಲ್ಲ. ಹೀಗೆ ಒಂದಲ್ಲ ಎರಡಲ್ಲ, ಪಟ್ಟಿ ಮಾಡುತ್ತಾ ಹೋದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ವಿಚಾರದಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಗಳು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ನಾನು ಈವರೆಗೂ ನೋಡಿರಲಿಲ್ಲ. ವಿರೋಧ ಪಕ್ಷದ ಪ್ರತಿನಿಧಿಗಳಾಗಿ ನಮ್ಮ ನಾಯಕರು ವಾಹನ ಚಾಲಕರಿಂದ, ಅಸಂಘಟಿತ ಕಾರ್ಮಿಕರವರೆಗೂ ಸಮಾಜದ ಎಲ್ಲ ವರ್ಗದವರನ್ನು ಕರೆದು ಮಾತನಾಡಿ ಅವರ ಕಷ್ಟಕ್ಕೆ ಧ್ವನಿಯಾಗಿದ್ದೇವೆ. ಇಲ್ಲಿ ಪಕ್ಷದ ಭಿನ್ನತೆ ಮರೆಯೋಣ. ಒಟ್ಟಾಗಿ ಸೇರಿ ಅಧಿಕಾರದಲ್ಲಿರಬಹುದು, ಇಲ್ಲದೇ ಇರಬಹುದು. ಜನಪ್ರತಿನಿಧಿಗಳಾಗಿರುವ ನಿಮ್ಮನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ನಾವು ಸಿದ್ಧವಿದ್ದೇವೆ. ನಿಮ್ಮ ಸಹಕಾರವಿರಲಿ. ನೀವು ಎಲ್ಲಿ, ಯಾವಾಗ ಚರ್ಚೆಗೆ ನಾವು ಬರುತ್ತೇವೆ. ಈ ವಿಚಾರದಲ್ಲಿ ಅಂತಸ್ತು ಇಲ್ಲ. ರೈತರು, ಕಾರ್ಮಿಕರು ಸೇರಿ ಎಲ್ಲ ವರ್ಗದವರನ್ನು ಪ್ರತಿನಿಧಿಸುವ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ನೀವು ನಮಗೆ ಸಹಕಾರ ನೀಡಿದ್ದೀರಿ. ಅದೇರೀತಿ ನಾವು ಕೂಡ ನಿಮಗೆ ಸಹಕಾರ ನೀಡುತ್ತೇವೆ' ಎಂದರು.

ಎಲ್ಲ ವರ್ಗದ ಜನರ ಬದುಕು ಶೋಚನೀಯವಾಗಿದೆ

ಎಲ್ಲ ವರ್ಗದ ಜನರ ಬದುಕು ಶೋಚನೀಯವಾಗಿದೆ

'ತೋಟಗಳಲ್ಲಿ ಫಲಗಳು ಕೊಳೆಯುತ್ತಿವೆ. ಮುಸಲ್ಮಾನ ವ್ಯಾಪಾರಿಗಳಿಗೆ ತೋಟದೊಳಗೆ ಕಾಲಿಡಲು ಅವಕಾಶ ನೀಡುತ್ತಿಲ್ಲ. ಬೇರೆ ರಾಜ್ಯದವರು ಬರುವಂತಿಲ್ಲ. ಕೋಳಿಗಳನ್ನು ಜೀವಂತವಾಗಿ ಮಣ್ಣಲ್ಲಿ ಮುಚ್ಚಿದ್ದಾರೆ. ಇದೆಲ್ಲವನ್ನೂ ನೋಡಿದರೆ ಇಂದು ಎಲ್ಲ ವರ್ಗದ ಜನರ ಬದುಕು ಶೋಚನೀಯವಾಗಿದೆ. ಈ ವರ್ಗದ ಜನರನ್ನು ಬದುಕಿಯೂ ಸಾಯುವಂತೆ ಮಾಡಲಾಗಿದೆ. ಅಂತಹವರಿಗೆ ಮತ್ತೆ ಜೀವ ತುಂಬುವ ಬಗ್ಗೆ ಇಂದು ಚರ್ಚೆ ಮಾಡಿ ನಿಮ್ಮ ಅಭಿಪ್ರಾಯ ಸಂಗ್ರಹಿಸಲು ವಿರೋಧ ಪಕ್ಷದ ನಾಯಕರು ಸಭೆ ಕರೆದಿದ್ದಾರೆ. ನಾವು ಅವರ ಜತೆ ಇದ್ದೇವೆ. ನೀವು ಅವರ ಜತೆ ಇರಿ. ನಾವೆಲ್ಲ ಒಟ್ಟಾಗಿ ಒಂದು ಯೋಜನೆ ರೂಪಿಸಿ ಈ ರಾಜ್ಯದ ಜನತೆಯ ಜೀವ ಹಾಗೂ ಜೀವನವನ್ನು ಉಳಿಸಲು ಶ್ರಮಿಸೋಣ' ಎಂದು ಮನವಿ ಮಾಡಿದರು.

English summary
KPCC President DK Shivakumar Upset With Karnataka Government About Corona Lockdown Scam. KPCC President DK Shivakumar Conducting Opposition Parties Leaders And Farmers And labours Leaders Meeting In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X