ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ನಾಗೇಂದ್ರ ಆತ್ಮಹತ್ಯೆ: ಮೊಂಬತ್ತಿ ಹಚ್ಚಿ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಆ. 21: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಾ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಹೊಣೆ. ತಪ್ಪಿತಸ್ಥ ಅಧಿಕಾರಿಯ ಮೇಲೆ ತಕ್ಷಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Recommended Video

Sumalatha ಸೊಂಟಕ್ಕೆ ಕೈ ಹಾಕಿದ Yediyurappa | Onendia Kannada

ಕೆಪಿಸಿಸಿ ವೈದ್ಯ ಘಟಕದ ವತಿಯಿಂದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ವೈದ್ಯರು ಹಾಗೂ ಕಾರ್ಯಕರ್ತರು ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ನೈಜ ಕೊರೊನಾ ವಾರಿಯರ್ ಡಾ. ನಾಗೇಂದ್ರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಸಾವಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

KPCC protest demanding on guilty officer who is responsible for THO Dr Nagendra suicide

ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಾ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ ಸಂಗತಿ. ಈ ರೀತಿ ಆಗಬಾರದಿತ್ತು. ಆದರೆ ಮೇಲಧಿಕಾರಿಗಳ ಒತ್ತಡದಿಂದ ಹೀಗೆ ಆಗಿದೆ. ಅವರ ಸಾವಿಗೆ ಯಾರು ಕಾರಣ ಎಂದು ಆರೋಪಿಸಲಾಗಿದೆಯೊ, ಅವರ ಮೇಲೆ ತನಿಖೆ ನಡೆಸಿ ಶಿಕ್ಷೆ ಕೊಡಿ. ತನಿಖೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

English summary
Congress doctors cell have protested in Bengaluru demanding immediate legal action against the guilty officer who is responsible for Nanjanagudu THO Dr Nagendra suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X