ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ವಕ್ತಾರರಾಗಿದ್ದ ಜಾಫೆರ್ ಮೊಹಿಯುದ್ದೀನ್ ಎಎಪಿ ಸೇರ್ಪಡೆ

|
Google Oneindia Kannada News

ಬೆಂಗಳೂರು, ನವೆಂಬರ್ 11: ಸಾಮಾಜಿಕ ಹೋರಾಟಗಾರ ಹಾಗೂ ಮಾಜಿ ಕೆಪಿಸಿಸಿ ವಕ್ತಾರರಾಗಿ ಜಾಫೆರ್ ಮೊಹಿಯುದ್ದೀನ್ ಅವರು ಆಮ್‌ ಆದ್ಮಿ ಪಾರ್ಟಿಯನ್ನು ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಸಮ್ಮುಖದಲ್ಲಿ ಶುಕ್ರವಾರ ಸೇರ್ಪಡೆಗೊಂಡರು.

ಬೆಂಗಳೂರಿನ ಆಮ್‌ ಆದ್ಮಿ ಪಾರ್ಟಿ (ಎಎಪಿ) ರಾಜ್ಯ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮತ್ತೊಬ್ಬ ಕಾಂಗ್ರೆಸ್‌ ಮುಖಂಡರು ಎಎಪಿ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ, ರಾಯಚೂರು ಮೂಲದವರಾದ ಜಾಫೆರ್ ಮೊಹಿಯುದ್ದೀನ್ ಅವರು ಎಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದಾಗಲೇ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದವರು. ಇವರು ಭಾರತೀಯ ವಾಯುಪಡೆಯಲ್ಲಿ ಡೆಪ್ಯುಟಿ ಆರ್ಕಿಟೆಕ್ಟ್ ಆಗಿ ಸುಮಾರು ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದರು.

ರಾಯಚೂರಿನಲ್ಲಿ 1997ರಲ್ಲಿ ಜಾಫೆರ್‌ ಅಸೋಸಿಯೇಟ್ಸ್‌ ಎಂಬ ಸ್ವಂತ ಸಂಸ್ಥೆ ಕಟ್ಟಿದ್ದರು. ಕತ್ಪುಟ್ಲಿಯಾನ್‌ ಥಿಯೇಟರ್‌ ಗ್ರೂಪ್‌ ಎಂಬ ಎನ್‌ಜಿಒ ಅಧ್ಯಕ್ಷರಾಗಿ ರಂಗಭೂಮಿ, ಕಲೆ, ಸಂಗೀತವನ್ನು ಪ್ರೋತ್ಸಾಹಿಸಿದವರು. ಫುವಾಕ್ ಎಂಬ ಎನ್‌ಜಿಒ ಅಧ್ಯಕ್ಷರಾಗಿ ಉರ್ದು ಲೇಖಕರು ಹಾಗೂ ಕಲಾವಿದರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಹೋರಾಡಿದ್ದರು ಎಂದು ಸೇರ್ಪಡೆಗೊಂಡ ನೂತನ ನಾಯಕರನ್ನು ಪರಿಚಯಿಸಿದರು.

KPCC Spokesperson Jaffer Mohiuddin joined Aam Aadmi Party at Bengaluru

ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ದೃಶ್ಯಮಾಧ್ಯಮಗಳ ಹಲವು ಚರ್ಚೆಗಳಲ್ಲಿ ಭಾಗವಹಿಸಿದ ಅನುಭವ ಜಾಫೆರ್ ಹೊಂದಿದ್ದಾರೆ. ಮಾನವ ಹಕ್ಕುಗಳು ಹಾಗೂ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆದಾಗಲ್ಲೆಲ್ಲ ಅದರ ವಿರುದ್ಧ ಪ್ರತಿಭಟಿಸಿದ್ದಾರೆ. 2009ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಎಂದು ತಿಳಿಸಿದರು.

ಮೂಲಸೌಕರ್ಯ ಸುಧಾರಣೆಯಲ್ಲಿ ಎಎಪಿಗೆ ಬದ್ಧತೆ ಇದೆ

ಆಮ್‌ ಆದ್ಮಿ ಪಾರ್ಟಿ ಸೇರಿ 2014ರ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲಿ ಭಾಗಿಯಾಗಿದ್ದರು. ಕಾರಣಾಂತರದಿಂದ 2015ರ ನಂತರ ಆಮ್‌ ಆದ್ಮಿ ಪಾರ್ಟಿಯಿಂದ ದೂರವಾಗಿ, 2016ರಲ್ಲಿ ಕಾಂಗ್ರೆಸ್‌ ಸೇರಿದ್ದರು. 2019ರ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದರು. ಈಗ ಇವರು ಮತ್ತೆ ಎಎಪಿಗೆ ಮರಳಿದ್ದು ಸಂತಸ ಮೂಡಿಸಿದೆ ಎಂದು ಹೇಳಿದರು.

KPCC Spokesperson Jaffer Mohiuddin joined Aam Aadmi Party at Bengaluru

ಈ ಸಂದರ್ಭದಲ್ಲಿ ಜಾಫೆರ್ ಮೊಹಿಯುದ್ದೀನ್ ಮಾತನಾಡಿ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರದ ಸುಧಾರಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಗಿರುವ ಬದ್ಧತೆ ಪ್ರಶಂಸನೀಯ. ಪ್ರಸ್ತುತ ರಾಜಕೀಯದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ತೆಗೆದುಕೊಳ್ಳುತ್ತಿದೆ. ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹೊಸ ಜನಪರ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರುತ್ತಿದೆ.

ಒಂದು ಗುಣಮಟ್ಟ ಆಡಳಿತ ಹೇಗಿರುತ್ತದೆ ಎಂಬುದನ್ನು ಎಎಪಿ ದೇಶಕ್ಕೆ ತೋರಿಸಿಕೊಡುತ್ತಿದೆ. ಭ್ರಷ್ಟ ಬಿಜೆಪಿಯನ್ನು ಮೂಲೆಗುಂಪು ಮಾಡುವ ಸಾಮರ್ಥ್ಯ ಎಎಪಿಗೆ ಇದೆ. ಮುಂದಿನ ಎಲ್ಲ ಚುನಾವಣೆಗಳಲ್ಲಿ ಎಎಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದು ಜಾಫೆರ್ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹಾಗೂ ಇತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

English summary
KPCC Spokesperson Jaffer Mohiuddin joined Aam Aadmi Party at Bengaluru on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X