ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂವರು ಕಾಂಗ್ರೆಸ್ ಮುಖಂಡರನ್ನು ಅಮಾನತು ಮಾಡಿದ ಕೆಪಿಸಿಸಿ

|
Google Oneindia Kannada News

Recommended Video

ಪಕ್ಷ ವಿರೋಧಿ ಕೆಲಸ ಮಾಡಿದಕ್ಕೆ ಅಮಾನತು ಮಾಡಿದ ಕೆಪಿಸಿಸಿ | Oneindia Kannada

ಬೆಂಗಳೂರು, ಜನವರಿ 21: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ತನ್ನ ಮೂವರು ಮಾಜಿ ಪ್ರಧಾನ ಕಾರ್ಯದರ್ಶಿಗಳನ್ನು ಅಮಾನತು ಮಾಡಿದೆ.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಮಂಜುನಾಥ್, ಎ ಕೆಂಚೇಗೌಡ, ಎಂ.ಜಿ.ಬಲರಾಮ ಅವರನ್ನು ಕೆಪಿಸಿಸಿ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಮಾನತು ಮಾಡಿದೆ. ಈ ಕುರಿತು ಮಂಗಳವಾರ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ, ''ಪಕ್ಷದಲ್ಲಿದ್ದು ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ'' ಎಂದು ಗಂಭೀರ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷ ಹುದ್ದೆಗೆ ನೇಮಕ: ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದರೇ ಮೂಲ ಕಾಂಗ್ರೆಸ್ಸಿಗರು?ಅಧ್ಯಕ್ಷ ಹುದ್ದೆಗೆ ನೇಮಕ: ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದರೇ ಮೂಲ ಕಾಂಗ್ರೆಸ್ಸಿಗರು?

ಎಐಸಿಸಿ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಅಮಾನತುಗೊಂಡ ಮೂವರೂ ನಿರಂತರವಾಗಿ ಇತ್ತೀಚೆಗೆ ಕಾಂಗ್ರೆಸ್ ಹಾಗೂ ಅದರ ನಾಯಕರ ವಿರುದ್ಧ ಆರೋಪಗಳನ್ನು ಮಾಡಿ ಪಕ್ಷಕ್ಕೆ ಕಳಂಕ ತಂದಿದ್ದರು ಎಂದು ಗುಂಡೂರಾವ್ ತಿಳಿಸಿದ್ದಾರೆ.

KPCC Suspended Three Congress Leaders

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ಈಗಾಗಲೇ ಆಂತರಿಕ ಜಗಳಗಳು ನಡೆದಿದ್ದು, ಪಕ್ಷಕ್ಕೆ ಮುಜುಗರವನ್ನುಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದೇ ಸುಮ್ಮನಿರುವುದಿಲ್ಲ ಎಂಬ ಸಂದೇಶವನ್ನು ಗುಂಡೂರಾವ್ ಈ ಮೂಲಕ ಕಳಿಸಿದ್ದಾರೆ.

English summary
The Karnataka Pradesh Congress Committee (KPCC) has suspended three of its former general secretaries in the wake of anti-party activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X