ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಆರ್ ಮಾರುಕಟ್ಟೆ ಅಭಿವೃದ್ಧಿ
ಬೆಂಗಳೂರು, ಜನವರಿ 11:ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಗರದ ಕೆಆರ್ ಮಾರುಕಟ್ಟೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ತಿಳಿಸಿದ್ದಾರೆ.
ಇಂದು ಕೆಆರ್ ಮಾರುಕಟ್ಟೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿ, ಮಾರುಕಟ್ಟೆಯ ಕಟ್ಟಡವನ್ನು ಹಾಗೆ ಉಳಿಸಿಕೊಂಡು ಇತರೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 14 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಪಾದಚಾರಿ ಮಾರ್ಗ ಅಭಿವೃದ್ಧಿ ಹಾಗೂ ಮಾಂಸದ ಮಾರುಕಟ್ಟೆ ಅಭಿವೃದ್ಧಿಗಾಗಿ ಯೋಜನೆ ಸಿದ್ಧಪಡಿಸಲಾಗಿದ್ದು, ಎಲ್ಲಾ ಕಾರ್ಯಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.
ಸಾಡೇಸಾತಿ ಶನಿ ಇದು ನಿಮ್ಮ ರಾಶಿಯಲ್ಲಿದ್ದರೆ ದೋಷವೋ ಫಲವೋ? | Effects of Sade Sati On Signs | Oneindia Kannada
ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ, ಒಟ್ಟಾರೆ 14 ಕೋಟಿ ರೂ. ವೆಚ್ಚದಲ್ಲಿ ಇಡೀ ಮಾರುಕಟ್ಟೆಯನ್ನು ಪುನರ್ ನವೀಕರಣ ಮಾಡಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.