• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆ.ಆರ್. ಮಾರ್ಕೆಟ್ ಠಾಣೆ ಕಾನ್ ಸ್ಟೇಬಲ್ ಬಲಿ ಪಡೆದ ಬಿಎಂಟಿಸಿ

|

ಬೆಂಗಳೂರು, ಮಾರ್ಚ್‌ 04: ಕಿಲ್ಲರ್ ಬಿಎಂಟಿಸಿ ಪೊಲೀಸ್ ಕಾನ್‌ಸ್ಟೇಬಲ್ ನನ್ನು ಬಲಿ ಪಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಬ್ಯಾಡರಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಾವನ್ನಪ್ಪಿದ್ದಾರೆ.

ರಾಮಾಚಾರಿ (47) ಸಾವನ್ನಪ್ಪಿದ ಕಾನ್‌ಸ್ಟೇಬಲ್. ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರಾಮಚಾರಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ 1.45 ರ ಸುಮಾರಿಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪ ಬೈಕ್ ನಲ್ಲಿ ಚಲಿಸುತ್ತಿದ್ದ ರಾಮಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ತಲೆಗೆ ತೀವ್ರತರ ಪೆಟ್ಟಾಗಿದೆ. ಗಾಯಾಳು ಪೊಲೀಸ್ ಪೇದೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

   'ಸದನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು?-ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ | Oneindia Kannada

   ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ರಾಮಚಾರಿ ಅವರ ಸಾವಿಗೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಸಂತಾಪ ಸೂಚಿಸಿದ್ದಾರೆ.

   English summary
   KR Market station police constable has died in an accident between a BMTC bus and a bike in Byadarahalli, Bangalore know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X