ಸೆಪ್ಟೆಂಬರ್ 1ರಿಂದ ಕೆ. ಆರ್. ಮಾರುಕಟ್ಟೆ ಓಪನ್
ಬೆಂಗಳೂರು, ಆಗಸ್ಟ್ 24 : ಬೆಂಗಳೂರು ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಕೆ. ಆರ್. ಮಾರುಕಟ್ಟೆ ಸೆಪ್ಟೆಂಬರ್ 1ರಿಂದ ಆರಂಭವಾಗುತ್ತಿದೆ. ಕೋವಿಡ್ 19 ಭೀತಿಯ ಕಾರಣದಿಂದಾಗಿ ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು.
Recommended Video
ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ. ಸಿ. ಮೋಹನ್ ಮುಂತಾದವರು ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಗಸ್ಟ್ ಅಂತ್ಯದಲ್ಲಿ ಪ್ರಕಟವಾಗುವ ನೂತನ ಮಾರ್ಗಸೂಚಿಯಲ್ಲಿ ಮಾರುಕಟ್ಟೆ ತೆರೆಯಲು ಅನುಮತಿ ನೀಡುವ ನಿರೀಕ್ಷೆ ಇದೆ.
ಹೆಚ್ಚು ಜನರು ಸೇರುತ್ತಾರೆ, ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗಲಿದೆ ಎಂಬ ಕಾರಣಕ್ಕೆ ಲಾಕ್ ಡೌನ್ ಘೋಷಣೆಯಾದ ತಕ್ಷಣ ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು. ಈಗಲೂ ಸಹ ಮಾರುಕಟ್ಟೆ ಬಂದ್ ಆಗಿದ್ದು, ಕೆಲವು ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ಬಿಬಿಎಂಪಿ ಮೇಯರ್ ಮತ್ತು ಇತರ ಅಧಿಕಾರಿಗಳು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರುಕಟ್ಟೆ ತೆರೆಯುವ ಮುನ್ನ ಕೈಗೊಳ್ಳಬೇಕಾದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮೇಯರ್ ಸೂಚನೆ ನೀಡಿದರು.
ಕೆ.ಆರ್.ಮಾರುಕಟ್ಟೆ ಬಳಿ ಜಲಮಂಡಳಿ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಲಾಯಿತು.
ಮಾರುಕಟ್ಟೆ ಆರಂಭವಾದ ಬಳಿಕ ಸೋಂಕು ನಿವಾರಕ ಔಷಧಿ ಸಿಂಪಡಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.












Click it and Unblock the Notifications