ಬೆಂಗಳೂರಿನಲ್ಲಿ ಬೀದಿದೀಪ ಅಳವಡಿಕೆಗೆ ಅ.31 ಡೆಡ್‌ಲೈನ್‌; ಗುತ್ತಿಗೆದಾರರಿಗೆ ₹93.67 ಲಕ್ಷ ದಂಡ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಬೀದಿದೀಪಗಳ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಕ್ರಮ ಕೈಗೊಂಡಿದ್ದಾರೆ. ನಗರದಾದ್ಯಂತ ಎಲ್‌ಇಡಿ ಬೀದಿದೀಪಗಳ ಅಳವಡಿಕೆ ಹಾಗೂ ಹಳೆಯ ದೀಪಗಳ ಬದಲಾವಣೆ ಕಾರ್ಯವನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರ ಗಡುವು ನೀಡಿದ್ದಾರೆ. ಬೀದಿದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಗುತ್ತಿಗೆದಾರರಿಗೆ ಈವರೆಗೆ ಒಟ್ಟು 93.67 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ನಡೆದ ವರ್ಚುವಲ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬೀದಿದೀಪಗಳ ಅಳವಡಿಕೆ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಕೇವಲ ಅಧಿಕಾರಿಗಳು ನೀಡುವ ವರದಿಗಳ ಆಧಾರದ ಮೇಲೆ ಪರಿಶೀಲಿಸಬಾರದು. ಬದಲಾಗಿ ಸ್ಥಳಕ್ಕೆ ತೆರಳಿ ಕಾಮಗಾರಿಯ ಗುಣಮಟ್ಟ ಮತ್ತು ದೀಪಗಳ ಕಾರ್ಯನಿರ್ವಹಣೆಯನ್ನು ಖುದ್ದಾಗಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Krishna Byre Gowda Bengaluru Sets October 31 Deadline for LED Streetlights Contractors Fined 93 67 Lakh

ಅ.31ರೊಳಗೆ ಎಲ್‌ಇಡಿ ದೀಪಗಳ ಅಳವಡಿಕೆ ಸೂಚನೆ

ನಗರದ ಹಲವು ಪ್ರದೇಶಗಳಲ್ಲಿ ಎಲ್‌ಇಡಿ ಬೀದಿದೀಪಗಳ ಅಳವಡಿಕೆ ಹಾಗೂ ಹಳೆಯ ದೀಪಗಳ ಬದಲಾವಣೆ ಕಾರ್ಯ ಪೂರ್ಣಗೊಂಡಿದ್ದರೂ, ಒಟ್ಟಾರೆ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಳಿದಿರುವ ಎಲ್ಲ ಕಾಮಗಾರಿಗಳನ್ನು ಅಕ್ಟೋಬರ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದ್ದಾರೆ. ಕಾಮಗಾರಿ ಸಮರ್ಪಕವಾಗಿ ನಡೆಯದಿದ್ದರೆ ಅಥವಾ ಅಳವಡಿಸಿದ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ದಂಡ ವಿಧಿಸುವಂತೆ ಸೂಚಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ಕಳೆದ ಮೂರು ತಿಂಗಳಿಂದ ಸಂಬಂಧಿತ ಅಧಿಕಾರಿಗಳ ಜೊತೆ ಸತತ ಸಭೆ ನಡೆಸಿದ್ದರು. ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಹೆಚ್.ವಿ. ರಮೇಶ್ ಅವರನ್ನ ಅಮಾನತುಗೊಳಿಸಿದ್ದರು.

ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಸೂಚನೆ

ಅಲ್ಲದೆ, ಸೆಪ್ಟೆಂಬರ್ 18 ರ ರಾತ್ರಿ ಖುದ್ದು ಫೀಲ್ಡಿಗಿಳಿದು ಜೆಪಿ ನಗರದಿಂದ ಬನ್ನೇರುಘಟ್ಟ ನೈಸ್ ರಸ್ತೆಯ ವರೆಗೆ ಪರಿಶೀಲನೆ ನಡೆಸಿ ಅಧಿಕ ಸಂಖ್ಯೆಯಲ್ಲಿ ಬೀದಿ ದೀಪಗಳು ಕೆಲಸ ಮಾಡದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬೀದಿ ದೀಪಗಳ ಕಾರ್ಯ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರುವ ಸಚಿವರು, ಈ ಕುರಿತು ಶುಕ್ರವಾರವೂ ಸಹ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ, ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಎಲ್‌ಇಡಿ ಬೀದಿ ದೀಪಗಳ ಗುಣಮಟ್ಟ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಮೂಲಕ ಖಚಿತಪಡಿಸಿಕೊಳ್ಳಬೇಕು. ದೀಪಗಳನ್ನು ಸಮರ್ಪಕವಾಗಿ ಅಳವಡಿಸದಿದ್ದಲ್ಲಿ ಅಥವಾ ಅವು ಕಾರ್ಯನಿರ್ವಹಿಸದಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ದಂಡ ವಿಧಿಸಬೇಕು ಎಂದು ನಿರ್ದೇಶನ ನೀಡಿದರು.

ಎಲ್‌ಇಡಿ ದೀಪಗಳ ಅಳವಡಿಕೆ

ನಗರದಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಹಾಗೂ ಹಳೆಯ ದೀಪಗಳ ಬದಲಾವಣೆ ಕಾರ್ಯ ಪ್ರಗತಿಯಲ್ಲಿದೆ. ಕಳೆದ ತಿಂಗಳ ಪರಿಶೀಲನೆ ಹಾಗೂ ಸತತ ಸಭೆಗಳ ನಂತರ ಬೀದಿ ದೀಪಗಳ ಅಳವಡಿಕೆ ಕಾರ್ಯ ಈಗಾಗಲೇ ಹಲವು ಪ್ರದೇಶಗಳಲ್ಲಿ ಪೂರ್ಣಗೊಂಡಿದೆ. ಬೀದಿ ದೀಪಗಳ ಕಾರ್ಯಕ್ಷಮತೆಯೂ ಉತ್ತಮವಾಗಿರುವುದು ಸಂತೋಷದ ವಿಚಾರ.

ಆದರೆ, ಈ ಪ್ರಗತಿ ಸಾಲದು. ಬಾಕಿ ಉಳಿದಿರುವ ಪ್ರದೇಶಗಳಲ್ಲೂ ಅಕ್ಟೋಬರ್ 31ರೊಳಗೆ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಅಲ್ಲದೆ, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಡಿಯಂ ಲೈಟುಗಳನ್ನು ಎಲ್ಇಡಿ ಲೈಟುಗಳನ್ನಾಗಿ ಮಾರ್ಪಡಿಸಲು ಕ್ರಮವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿ ಪೂರ್ಣಗೊಳಿಸುವ ವೇಳಾಪಟ್ಟಿ ಸಲ್ಲಿಸಲು ಸೂಚನೆ

ನಗರದಲ್ಲಿ ಬೀದಿ ದೀಪಗಳ ಕಾರ್ಯನಿರ್ವಹಣೆಯನ್ನು ಸ್ವಯಂಚಾಲಿತವಾಗಿ ಮೇಲ್ವಿಚಾರಣೆ ಮಾಡಲು ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯಾದ ಸಿಸಿಎಂಎಸ್‌(Centralized Control and Monitoring System) ಅಳವಡಿಸುವ ಕಾರ್ಯಕ್ಕೆ ಸಂಬಂಧಿಸಿದಂತೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಕಾಲಮಿತಿಯ ವಿವರಗಳೊಂದಿಗೆ ವೇಳಾಪಟ್ಟಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೂರುಗಳ ಸಂಖ್ಯೆಯಲ್ಲಿ ಇಳಿಕೆ

ಬೀದಿ ದೀಪಗಳ ನಿರ್ವಹಣೆಯ ಕುರಿತು ನಿರಂತರ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ ಸುಧಾರಣೆ ಕಂಡುಬರುತ್ತಿದೆ. ಸಹಾಯ 2.0 ತಂತ್ರಾಂಶದಲ್ಲಿ ಬೀದಿ ದೀಪಗಳಿಗೆ ಸಂಬಂಧಿಸಿದಂತೆ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯೂ ಕ್ರಮೇಣ ಇಳಿಕೆಯಾಗುತ್ತಿದೆ.

ಜೂನ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 293 ದೂರುಗಳು ದಾಖಲಾಗುತ್ತಿದ್ದರೆ, ಅಕ್ಟೋಬರ್ ತಿಂಗಳಲ್ಲಿ ಈ ಸಂಖ್ಯೆ 235ಕ್ಕೆ ಇಳಿಕೆಯಾಗಿದೆ. ಸಹಾಯ 2.0 ತಂತ್ರಾಂಶದ ಮೂಲಕ ಸ್ವೀಕರಿಸಲಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ. ಕಳೆದ ಸೆಪ್ಟೆಂಬರ್‌ನಿಂದ ಅಕ್ಟೋಬರ್ 15ರವರೆಗೆ ಒಟ್ಟು 8,186 ದೂರುಗಳು ದಾಖಲಾಗಿದ್ದು, ಈ ಪೈಕಿ ಈಗಾಗಲೇ 6,765 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+