KSET 2024 Results: ಕೆಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ: ಅಂಕಪಟ್ಟಿ ಪರಿಶೀಲನೆ ಹೇಗೆ? ಎಲ್ಲಿ? ತಿಳಿಯಿರಿ
ಬೆಂಗಳೂರು, ಮೇ 29: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2023ರ ಪರೀಕ್ಷೆಯನ್ನು 2024ರ ಜನವರಿ ತಿಂಗಳಲ್ಲಿ ಆಯೋಜಿಸಿತ್ತು. ಇದೀಗ ಈ ಪರೀಕ್ಷೆಯ (KSET Exam results 2024) ಫಲಿತಾಂಶ ಬಿಡುಗಡೆ ಆಗಿದ್ದು, 6675 ಮಂದಿ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ (KEA) ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)ವು ಇಂದು ಮಂಗಳವಾರ ಮೇ 28 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024ರ ಫಲಿತಾಂಶ ಪ್ರಕಟಿಸಿದೆ.

ಪ್ರಾಧಿಕಾರವು ಮೊದಲ ಬಾರಿಗೆ ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಕೆಸೆಟ್ ಆಯೋಜಿಸಿತ್ತು. ಆಫ್‌ಲೈನ್ ನಲ್ಲಿ ನಡೆದ ಈ ಪರೀಕ್ಷೆಯು 41 ವಿಷಯಗಳನ್ನು ಒಳಗೊಂಡಿದೆ. ಈ ಪರೀಕ್ಷೆಗಳು ರಾಜ್ಯದ ಏಳು ಕೇಂದ್ರಗಳಲ್ಲಿ ನಡೆಯಿತು. ಒಟ್ಟು 117,303 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಹಾಜರಾದ ಅಭ್ಯರ್ಥಿಗಳ ವಿವರ
ಕೆಸೆಟ್ ಎರಡು ಪರೀಕ್ಷೆಗಳಿಗೆ ಹಾಜರಾಗಿದ್ದು 95,201 ಅಭ್ಯರ್ಥಿಗಳು. ಆ ಪೈಕಿ 6,675 ಅಭ್ಯರ್ಥಿಗಳು ಎಲ್ಲಾ ವಿಭಾಗಗಳು ಮತ್ತು ವಿಷಯಗಳಲ್ಲಿ ಅರ್ಹತೆ ಪಡೆದಿದ್ದಾರೆ ಎಂದು ಕೆಇಎ ತಿಳಿಸಿದೆ. ಯುಜಿಸಿ ಮಾರ್ಗಸೂಚಿಗಳು ಹಾಗೂ ರಾಜ್ಯದ ಮೀಸಲಾತಿ ನೀತಿಗೆ ಅನುಗುಣವಾಗಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧವಾಗಿದೆ.

ಸದ್ಯ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಿ, ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಮೊದಲು ನೀವು ಈ ಅಧಿಕೃತ ವೆಬ್‌ಸೈಟ್‌ಗೆ https://cetonline.karnataka.gov.in/kea/kset2023 ಭೇಟಿ ಕೊಡಬೇಕು.
ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಮಾಹಿತಿಗೆ ಮೊದಲು KEA ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿದಂತೆ ತಮ್ಮ ಲಾಗಿನ್ ಗೆ ಬೇಕಾದ ಅಗತ್ಯ ಮಾಹಿತಿ ನಮೂದಿಸಬೇಕು.
KSET 2024 ಫಲಿತಾಂಶ ಪರಿಶೀಲಿಸುವ ವಿಧಾನ
* ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ atcetonline.karnataka.gov.in/kea ಗೆ ಭೇಟಿ ನೀಡಿ.
* ಜಾಲತಾಣದ ಮುಖಪುಟದಲ್ಲಿ ಕಾಣುವ KSET 2024 ಫಲಿತಾಂಶಗಳು" ಲಿಂಕ್‌ಗಾಗಿ ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಒಳಗೊಂಡಿರುವ ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ.
* ಹುಡುಕಾಟ (ಸರ್ಚ್) ಬಟನ್ ಕ್ಲಿಕ್ ಮಾಡಿ.
* ನಂತರ ನಿಮ್ಮ KSET ಫಲಿತಾಂಶ ಅಂಕಪಟ್ಟಿ ವೀಕ್ಷಿಸಬಹುದು. ಜೊತೆಗೆ ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಕಡಾಪ್ ಅಂಕಗಳನ್ನು, ಅಂಕಪಟ್ಟಿ ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ಹಳೆ ಲಿಂಕ್‌ಗಳನ್ನು ಇದೇ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications