ಕರಾಮುವಿ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭ
ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಎಂ.ಬಿ.ಎ.ಗೆ ಸಿ.ಇ.ಟಿ ಮುಖಾಂತರ ಪ್ರವೇಶಾತಿ ಇದ್ದು, ಮೇಲ್ಕಂಡ ಕೋರ್ಸ್ ಗಳ ಪ್ರಥಮ ವರ್ಷದ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಜುಲೈ 25 ಕಡೆಯ ದಿನವಾಗಿದೆ.
ಬೆಂಗಳೂರಿನ ಮಲ್ಲೇಶ್ವರಂ, ಚಾಮರಾಜಪೇಟೆ ಮತ್ತು ಹೆಬ್ಬಾಳದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂರು ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು. ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಗಳಲ್ಲದೆ ಬೇರೆ ಯಾವುದೇ ಅನಧಿಕೃತ ಅಧ್ಯಯನ ಕೇಂದ್ರಗಳಲ್ಲಿ ಅರ್ಜಿ ಖರೀದಿಸಿ ವಂಚನೆಗೊಳಗಾಗಬಾರದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ್ ಆರ್ ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ದೂರವಾಣಿ- 080 23448811, 9844506629 ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.












Click it and Unblock the Notifications