ಬೆಳ್ಳಂದೂರು ಕೆರೆ ಬಳಿಯ 488 ಕೈಗಾರಿಕೆ ಮುಚ್ಚಿ: KSPCB

ಬೆಳ್ಳಂದೂರು ಕೆರೆ ಜಲಾನಯನ ಪ್ರದೇಶದ 488 ಕೈಗಾರಿಕೆಗಳನ್ನು ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.

ಬೆಂಗಳೂರು, ಮೇ 03: ಉದ್ಯಾನ ನಗರಿ ಬೆಂಗಳೂರಿನ ಬೆಳ್ಳಂದೂರು ಕೆರೆಯ ನೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ ನೀಡಿದ್ದ ಆದೇಶಕ್ಕೆ ಪೂರಕವಾಗುವಂತೆ, ಕೆರೆಯ ಜಲಾನಯನ ಪ್ರದೇಶದ 488 ಕೈಗಾರಿಕೆಗಳನ್ನು ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.

ಬೆಳ್ಳಂದೂರು ಕೆರೆಗೆ ತ್ಯಾಜ್ಯವನ್ನು ಬಿಡುತ್ತಿದ್ದ ಫ್ಯಾಕ್ಟರಿಗಳನ್ನು ಗುರುತಿಸಿ ಈ ಆದೇಶ ನೀಡಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಹೇಳಿದ್ದಾರೆ.[ಬೆಳ್ಳಂದೂರು ಕೆರೆ ಸುತ್ತಲಿನ ಕೈಗಾರಿಕೆ ಮುಚ್ಚಿ: ಎನ್ ಜಿಟಿ]

Bellanduru lake

ಬೆಳ್ಳಂದೂರು ಕೆರೆಯಲ್ಲಿ ನೊರೆ ಮತ್ತು ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18 ರಂದು ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಷ್ಟ್ರೀಯ ಹಸಿರು ಪ್ರಾಧಿಕಾರ (ಎನ್ ಜಿಟಿ) ಬೆಳ್ಳಂದೂರು ಕೆರೆ ಸುತ್ತಮುತ್ತಲಿನ ಕೈಗಾರಿಕೆಗಳನ್ನು ತಕ್ಷಣವೇ ಮುಚ್ಚಬೇಕೆಂದು ಮಧ್ಯಂತರ ಆದೇಶ ನೀಡಿತ್ತು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಕೆರೆ ಅಭಿವೃದ್ಧಿ ಪ್ರಾಧಿಕಾರ (LDA), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯ ಕೆಲ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಿರುವ ಎನ್ ಜಿಟಿ, ಕೆರೆ ಅಭಿವೃದ್ಧಿಗೆ 2 ವಾರಗಳಲ್ಲಿ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದು. ಈಗಾಗಲೇ ಬೆಳ್ಳಂದೂರು ಕೆರೆಯ ಸ್ವಚ್ಛತಾ ಕಾರ್ಯ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+