• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು-ಎರ್ನಾಕುಲಂ ವಿಶೇಷ ಎಕ್ಸ್‌ಪ್ರೆಸ್ ರೈಲು, ವೇಳಾಪಟ್ಟಿ

|

ಬೆಂಗಳೂರು, ಜನವರಿ 06: ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಎರ್ನಾಕುಲಂ ನಡುವೆ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ. ಜನವರಿ 8ರಿಂದ ಈ ರೈಲು ಸಂಚಾರಕ್ಕೆ ಚಾಲನೆ ಸಿಗಲಿದೆ.

ರೈಲು ನಂಬರ್ 02678/02677 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ನಡುವೆ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ಹೇಳಿದೆ.

ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲು; ವೇಳಾಪಟ್ಟಿ

ರೈಲು ನಂಬರ್ 02678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಎರ್ನಾಕುಲಂನಿಂದ 9.10ಕ್ಕೆ ಹೊರಡಲಿದೆ. ಅದೇ ದಿನ 19:50ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ. ಜನವರಿ 8ರಿಂದ ರೈಲು ಆರಂಭವಾಗಲಿದೆ.

ಕೆಂಪೇಗೌಡ ಏರ್‌ಪೋರ್ಟ್‌ಗೆ ರೈಲು ಸೇವೆ ಆರಂಭ: ಟಿಕೆಟ್ ದರ ಕೇವಲ 10 ರೂ.

ಜನವರಿ 9ರಿಂದ ರೈಲು ನಂಬರ್ 02677 ಕೆಎಸ್ಆರ್ ಬೆಂಗಳೂರು- ಎರ್ನಾಕುಲಂ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ಬೆಂಗಳೂರಿನಿಂದ 6:10ಕ್ಕೆ ಹೊರಡುವ ರೈಲು ಅದೇ ದಿನ 16:55ಕ್ಕೆ ಎರ್ನಾಕುಲಂ ತಲುಪಲಿದೆ.

ಪ್ರಪ್ರಥಮ ಚಾಲಕ ರಹಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ

ರೈಲು ಹೊಸೂರು, ಧರ್ಮಪುರಿ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲ್ಘಾಟ್, ತ್ರಿಶೂರ್ ಮೂಲಕ ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

21 ಕೋಚ್‌ಗಳನ್ನು ಹೊಂದಿರುವ ವಿಶೇಷ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು 1 ಎಸಿ ಚೇರ್ ಕಾರ್, 8 ಸೆಕೆಂಡ್ ಕ್ಲಾಸ್ ಬೋಗಿ, 9 ಸಾಮಾನ್ಯ ಬೋಗಿಯನ್ನು ಒಳಗೊಂಡಿದೆ.

ರೈಲಿನಲ್ಲಿ ಪ್ರಯಾಣಿಸುವ ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಕಟಿಸಿರುವ ಕೋವಿಡ್ 19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸೂಚನೆ ನೀಡಲಾಗಿದೆ.

English summary
South western railway will run super fast special express train between KSR Bengaluru and Ernakulam daily from January 8, 2021. Here are the schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X