ಬೆಂ-ಹೈದರಾಬಾದ್ ನಡುವೆ ಹೊಸ ಬಸ್ ಘೋಷಿಸಿದ ಕೆಎಸ್ಆರ್ಟಿಸಿ
ಬೆಂಗಳೂರು, ಜುಲೈ 24 : ಕೆಎಸ್ಆರ್ಟಿಸಿ ಬೆಂಗಳೂರು-ಹೈದರಾಬಾದ್ ನಡುವೆ ಹೊಸ ಬಸ್ ಸೇವೆಯನ್ನು ಘೋಷಣೆ ಮಾಡಿದೆ. ಜುಲೈ 26ರಿಂದ ಬಸ್ ಸಂಚಾರ ಆರಂಭವಾಗಲಿದ್ದು, 1,350 ರೂ. ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರಿಯ ವಿಭಾಗದ ವತಿಯಿಂದ ಬೆಂಗಳೂರು-ಹೈದರಾಬಾದ್ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಎಸಿ ಸ್ಲೀಪರ್ (ಮಲ್ಟಿ ಆಕ್ಸಲ್) ಬಸ್ ಸೇವೆಯನ್ನು ಆರಂಭಿಸಲಾಗುತ್ತಿದೆ.
ಜುಲೈ 26, 2019ರಿಂದ ಈ ಬಸ್ ಸಂಚಾರ ನಡೆಸಲಿದೆ. ಬೆಂಗಳೂರಿನಿಂದ ಹೊರಡುವ ಬಸ್ ಅನಂತಪುರ, ಗುತ್ತಿ, ಕರ್ನೂಲ್ ಮಾರ್ಗವಾಗಿ ಹೈದರಾಬಾದ್ಗೆ ಸಂಚಾರ ನಡೆಸಲಿದೆ.

ಬಸ್ ವೇಳಾಪಟ್ಟಿ : ಬೆಂಗಳೂರಿನಿಂದ ರಾತ್ರಿ 8.50ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 7.15ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್ನಿಂದ ರಾತ್ರಿ 8.15ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ.
ಕೆಲವು ದಿನಗಳ ದಿಂದೆ ಕೆಎಸ್ಆರ್ಟಿಸಿ ಬೆಂಗಳೂರು-ಮುಂಡರಗಿ ನಡುವೆ ಹೊಸ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿತ್ತು. ಬಳಿಕ ಬೆಂಗಳೂರು-ಚಿದಂಬರಂ ಮತ್ತು ಬೆಂಗಳೂರು-ಎರ್ನಾಕುಲಂ ಮಾರ್ಗದಲ್ಲಿ ಅಂಬಾರಿ ಡ್ರೀಮ್ ಕ್ಲಾಸ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಲಾಗಿತ್ತು.
-
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications