ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಪಿಎಸ್‌ಐ ಸೇರಿ ಇಬ್ಬರು ಸಾವು
ಬೆಂಗಳೂರು, ಮೇ 19: ಕರ್ನಾಟಕ ರಾಜ್ಯಾದ್ಯಂತ ಅತ್ಯುತ್ತಮ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ವೊಂದು ನಿಯಂತ್ರಣ ತಪ್ಪಿ ಮೋರಿಗೆ ಪಲ್ಟಿಯಾಗಿ ಬಿದ್ದ ಘಟನೆ ಬೆಂಗಳೂರು-ಕನಕಪುರ ರಸ್ತೆಯಲ್ಲಿ ನಡೆದಿದೆ. ಪರಿಣಾಮ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನ್ನು ನಾಗರಾಜ್ ಹಾಗೂ ಮತ್ತೊಬ್ಬರು ಇದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ನಂತರ ಮೋರೆಗೆ ತಿರುಗಿ ಪಲ್ಟಿ ಆಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳಲ್ಲಿ ಮೂರವನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಮತ್ತು ಮತ್ತೊಬ್ಬ ಗಾಯಾಳು ಅನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಎಂದಿನಂತೆ ಬರುತ್ತಿದ್ದ ಈ ಕೆಎಸ್‌ಆರ್‌ಟಿಸಿ ಬಸ್ ಕಗ್ಗಲೀಪುರ ಪೊಲೀಸ್ ಠಾಣೆ ಕೊಂಚ ದೂರದಲ್ಲಿ ನಿಯಂತ್ರಣ ಕಳೆದುಕೊಂಡಿದೆ. ನಿಯಂತ್ರಿಸಲು ಪ್ರಯತ್ನಿಸಿದರೂ ಆಗಿಲ್ಲ. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದ ಬಸ್ ನಿಲ್ಲದೇ ವಿಭಜಕ ದಾಟಿಕೊಂಡು ರಸ್ತೆಯಲ್ಲಿ ಬರುತ್ತಿದ್ದ ಪಿಎಸ್‌ಐ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಬೈಕ್ ಸವಾರರು ಅಸುನೀಗಿದ್ದಾರೆ ಎಂದು ವರದಿ ಆಗಿದೆ.
ಹೊಸ ಬಸ್ ಖರೀದಿಗೆ ಪ್ಲಾನ್
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿಲ್ಲ ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲು ಬೇಡಿಕೆಯನ್ನು ಕೇಂದ್ರ ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಶೀಘ್ರವೇ ಅಧಿಕೃತ ಘೋಷಣೆ ಆಗಲಿದೆ.
PM e Drive ಯೋಜನೆಯಡಿಯಲ್ಲಿ GCC ಮಾದರಿಯಲ್ಲಿ ಅತೀ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಬಿ.ಎಂ.ಟಿ.ಸಿ ಗೆ ಒದಗಿಸಬೇಕಿದೆ. ಇದರಿಂದ ನಗರದಲ್ಲಿ ಮತ್ತಷ್ಟು ಪರಿಣಾಮಕಾರಿ ಸೇವೆ ನೀಡಲು ಸಾಧ್ಯವಾಗುತ್ತದೆ. ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಸಾರ್ವಜನಿಕರಿಗೆ ಸಮಗ್ರ ಸಾರಿಗೆ ಸೌಲಭ್ಯದೊಂದಿಗೆ ಸೇವೆ ನೀಡುವಂತಾಗಬೇಕು ಎಂದೆಲ್ಲ ಸಚಿವರು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರಿಗೆ ಇವಿ ಬಸ್ ತರಲು ಸಚಿವರು ಮುಂದಾಗಿದ್ದಾರೆ. ತಮ್ಮ ಯೋಜನೆಗಳ ಬಗ್ಗೆ ವಿವರಿಸಿದ್ದಾರೆ. ಶೀಘ್ರವೇ ಕೇಂದ್ರ ಸರ್ಕಾರ ಈ ಬಗ್ಗೆ ಒಪ್ಪಿಗೆ ನೀಡಲಿದೆ.












Click it and Unblock the Notifications