ಬೆಂಗಳೂರು : ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ, ಒಂದು ಸಾವು
ಬೆಂಗಳೂರು, ಡಿಸೆಂಬರ್ 18 : ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಸಮೀಪ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಬ್ರೇಕ್ ಫೇಲ್ ಆದ ಕಂಟೈನರ್ ಕೆಎಸ್ಆರ್‌ಟಿಸಿ ಬಸ್ ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತ ಸಂಭವಿಸಿದೆ. [ಹಳಿತಪ್ಪಿದ ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಯೋಜನೆ]

4 ಬಸ್ಸು, 1 ಬೈಕ್, ಟಾಟಾ ಸುಮೋಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಕೆಎಸ್ಆರ್‌ಟಿಸಿ ಬಸ್ಸಿನ ಕಂಡಕ್ಟರ್ ಶಂಕ್ರಪ್ಪ ಎಂಬುವವರು ಅಪಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.[ಬೆಂಗಳೂರು-ಮೈಸೂರು ನಡುವೆ 6 ಪಥದ ರಸ್ತೆ ನಿರ್ಮಾಣ]
ಸರಣಿ ಅಫಘಾತದಿಂದಾಗಿ ಮೈಸೂರು ರಸ್ತೆಯಲ್ಲಿ 1 ಕಿ.ಮೀ.ಗೂ ಹೆಚ್ಚು ದೂರ ಸಂಚಾರ ದಟ್ಟಣೆ ಉಂಟಾಗಿದೆ. ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications