KSRTC: ಅಶ್ವಮೇಧ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ-ವಿಶೇಷತೆಗಳು ಹಾಗೂ ಮಾರ್ಗಗಳ ಮಾಹಿತಿ
ಬೆಂಗಳೂರು, ಫೆಬ್ರವರಿ, 05; ಈಗಾಗಲೇ ಸಾರಿಗೆ ಇಲಾಖೆ ಅಂಬಾರಿ ಉತ್ಸವ ಬಸ್, ಪಲ್ಲಕ್ಕಿ ಉತ್ಸವ ಬಸ್‌ಗಳನ್ನು ಪರಿಚಯಿಸಿದ್ದು, ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಹೊಸ ವಿನ್ಯಾಸದ 100 ಅಶ್ವಮೇಧ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಹಾಗಾದರೆ ಈ ಬಸ್‌ನಲ್ಲಿ ಏನೆಲ್ಲ ವಿಶೇಷತೆಗಳಿರಲಿವೆ, ದರಗಳ ಮಾಹಿತಿ ಹಾಗೂ ಯಾವೆಲ್ಲ ಮಾರ್ಗಗಳಲ್ಲಿ ಸಂಚರಿಸಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಹಾಗೆಯೇ ಈ ಬಸ್‌ಗಳಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಕೆಎಸ್‌ಆರ್‌ಟಿಸಿಯ ಕೆಂಗೇರಿ ವರ್ಕ್ ಶಾಪ್‌ಗೆ 100 ಹೊಸ ಬಸ್ ಬಂದಿವೆ. ಕೆಎಸ್ಆಆರ್ಟಿಸಿದೆ ಒಟ್ಟು 1,000 ಹೊಸ ಬಸ್‌ಗಳು ಬರಲಿವೆ. ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್‌ಗಳು ಬಂದಿವೆ. ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರುವರಿ 5) ಬೆಂಗಳೂರಿನ ವಿಧಾನಸೌಧದ ಮುಂಭಾಗ ಚಾಲನೆ ನೀಡಿದ್ದಾರೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರು ಇರಲಿದ್ದಾರೆ.
ಇನ್ನು ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನಿಡಿದೆ. ಮೊದಲ ಹಂತದಲ್ಲಿ ರಸ್ತೆಗಿಳಿದಿರುವ ಈ 100 ಬಸ್‌ಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ಹೆಸರಿಡಲಾಗಿದೆ. ಈ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಅಶ್ವಮೇಧ ಕ್ಲಾಸಿಕ್ ಬಸ್‌ಗಳು 3.42 ಮೀಟರ್ ಎತ್ತರವಿದ್ದು, 12 ಪ್ಯಾನಿಕ್ ಬಟನ್, ಜಿಪಿಎಸ್, 2 ರೇರ್ ಕ್ಯಾಮರಾ ಹಾಗೂ 6 ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಟ್‌ಗಳನ್ನು ಒಳಗೊಂಡಿವೆ. 52 ಬಕೆಟ್ ಸೀಟು, ಬಸ್ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೇಜ್ ಇಡಲು ಹೆಚ್ಚು ಸ್ಥಳಾವಕಾಶವನ್ನು ನೀಡಲಾಗಿದೆ.
ಈ ಬಸ್‌ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತವೆ. ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಈ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ ಎನ್ನುವ ಮಾಹಿತಿಯನ್ನು ಸಾರಿಗೆ ಇಲಾಖೆ ನೀಡಿದೆ.












Click it and Unblock the Notifications