ಬೆಂ-ಕಾಸರಗೋಡು ನಡುವೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆ

ಬೆಂಗಳೂರು, ಏಪ್ರಿಲ್ 19 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಕಾಸರಗೋಡು ನಡುವೆ ನೂತನ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಲಿದೆ. ಈ ಮಾರ್ಗದ ಪ್ರಯಾಣ ದರ 800 ರೂ. ಎಂದು ನಿಗದಿ ಮಾಡಲಾಗಿದೆ.

ಕರೋನಾ ಸ್ಲೀಪರ್ ಕೋಚ್ ಬಸ್ಸುಗಳನ್ನು ಬೆಂಗಳೂರು-ಕಾಸರಗೋಡು ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಓಡಿಸಲಿದೆ. ಬೆಂಗಳೂರಿನಿಂದ ರಾತ್ರಿ 9.15ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 5 ಗಂಟೆಗೆ ಕಾಸರಗೋಡು ತಲುಪಲಿದೆ. ಕಾಸರಗೋಡಿನಿಂದ ರಾತ್ರಿ 10ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 6 ಗಂಟೆಗೆ ಬೆಂಗಳೂರು ತಲುಪಲಿದೆ. [ರಾಜ್ಯದ ನಗರಗಳಲ್ಲಿ ಮೇ ಅಂತ್ಯದ ವೇಳೆಗೆ ನಗರ ಸಾರಿಗೆ]

bus

ಬೆಂಗಳೂರಿನ ಎಲ್ಲಾ ಮುಂಗಡ ಟಿಕೆಟ್ ಕೌಂಟರ್‌ಗಳಲ್ಲಿ ಈ ಮಾರ್ಗದಲ್ಲಿ ಸಂಚಾರ ನಡೆಸಲು ಟಿಕೆಟ್ ಬುಕ್ ಮಾಡಬಹುದು. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗೋವಾ, ಕೇರಳದ ಖಾಸಗಿ ಕೌಂಟರ್‌ಗಳಲ್ಲಿಯೂ ಟಿಕೆಟ್ ಬುಕ್ ಮಾಡಬಹುದಾಗಿದೆ. [13 ಬಸ್ ನಿಲ್ದಾಣದಲ್ಲಿ ವೈಫೈ ವ್ಯವಸ್ಥೆ]

30 ದಿನಗಳ ಮುಂಚಿತವಾಗಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ. www.ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-49696666 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. [ಬಸ್ ಪ್ರಯಾಣ ದರ ಕಡಿಮೆ ಮಾಡೋಲ್ಲ : ರೆಡ್ಡಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+