ಬೆಂಗಳೂರು-ಶಿರಡಿ ಕೆಎಸ್ಆರ್‌ಟಿಸಿ ಬಸ್ ಸೇವೆ ಆರಂಭ
ಬೆಂಗಳೂರು, ನವೆಂಬರ್ 19 : ಕೋವಿಡ್ ಲಾಕ್ ಡೌನ್ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿವಿಧ ರಾಜ್ಯಗಳ ನಡುವಿನ ಬಸ್ ಸೇವೆಯನ್ನು ಆರಂಭಿಸುತ್ತಿದೆ. ಬೆಂಗಳೂರು ನಗರ ಮತ್ತು ಶಿರಡಿ ನಡುವೆ ಬಸ್ ಸೇವೆಯನ್ನು ಆರಂಭಿಸಲಾಗಿದೆ.
ಗುರುವಾರ ಕೆಎಸ್‌ಆರ್‌ಟಿಸಿ ಈ ಕುರಿತು ಮಾಹಿತಿ ನೀಡಿದೆ. ಬೆಂಗಳೂರು - ಶಿರಡಿ ಸೇವೆಯನ್ನು ಪ್ರಾರಂಭಿಸಲಾಗಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದೆ.
ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಈ ಹಿಂದೆ ಕಾರ್ಯಾಚರಣೆ ನಡೆಸುತ್ತಿದ್ದಂತೆ ರಾಜ್ಯದ ಎಲ್ಲಾ ಸ್ಥಳಗಳಿಂದ ಎಲ್ಲಾ ಬಸ್ ಸಂಚಾರ ಆರಂಭಿಸಿತ್ತು.

ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಎಲ್ಲಾ ಮಾದರಿಯ ಬಸ್ ಸೇವೆಗಳನ್ನು ಕೆಎಸ್ಆರ್‌ಟಿಸಿ ಮುಂದುವರೆಸಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.
ಕೋವಿಡ್ ಮಾರ್ಗಸೂಚಿ ಅನ್ವಯೇ ಬಸ್‌ಗಳ ಸಂಚಾರ ನಡೆಸಲಾಗುತ್ತಿದೆ. ಬಸ್‌ನಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದೆ. ಬಸ್‌ನಲ್ಲಿ ಶೇ 50ರಷ್ಟು ಸೀಟುಗಳನ್ನು ಮಾತ್ರ ಭರ್ತಿ ಮಾಡಬೇಕು ಎಂಬ ನಿಯಮವನ್ನು ಸಡಿಲಿಸಲಾಗಿದೆ.
ಬೆಂಗಳೂರು-ಶಿರಡಿ ನಡುವೆ ಸಂಚಾರ ನಡೆಸುವ ಜನರು ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ಆಸನಗಳನ್ನು ಬುಕ್ ಮಾಡಬಹುದಾಗಿದೆ. ವೆಬ್ ಸೈಟ್ ವಿಳಾಸ www.ksrtc.in












Click it and Unblock the Notifications