ಕೆಎಸ್‌ಆರ್‌ಟಿಸಿಗೆ ಸಿಬ್ಬಂದಿ ಗೈರುಹಾಜರಿಯೇ ದೊಡ್ಡ ಸಮಸ್ಯೆ!
ಬೆಂಗಳೂರು, ಮೇ 02: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಗೈರುಹಾಜರಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಒಂದು ವರ್ಗದ ನೌಕರರು ಪೂರ್ವ ಮಾಹಿತಿ ಇಲ್ಲದೆ ಬಂಕ್ (ಗೈರು) ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಲಾಕ್‌ಡೌನ್ ನಂತರ ಪ್ರಾಥಮಿಕ ಹಂತದಿಂದ ಬಸ್‌ಗಳನ್ನು ಓಡಿಸುವಲ್ಲಿ ಕೆಎಸ್‌ಆರ್‌ಟಿಸಿ ತೊಡಗಿಸಿಕೊಂಡಿರುವುದರಿಂದ, ಸಿಬ್ಬಂದಿ ಹಠಾತ್ ಗೈರಾಗುವುದು ತನ್ನ ದೈನಂದಿನ ವ್ಯವಹಾರ ಮತ್ತು ಆದಾಯಕ್ಕೆ ಅಪಾಯವನ್ನುಂಟು ಮಾಡುತ್ತದೆ.
ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಯಲ್ಲಿ 35,000 ಉದ್ಯೋಗಿಗಳನ್ನು ಹೊಂದಿರುವ ದೇಶದ ಅತಿದೊಡ್ಡ ಸಾರಿಗೆ ನೌಕರರ ಸಂಸ್ಥೆಗಳಲ್ಲಿ ಒಂದಾಗಿದೆ. 35,000 ಮಂದಿಯಲ್ಲಿ 8.414 ಮಂದಿ ಶಿಸ್ತಿನ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಸುಮಾರು 7,200 ಶಿಸ್ತಿನ ಪ್ರಕರಣಗಳನ್ನು ಕೊನೆಗೊಳಿಸಲಾಗಿದ್ದು, ಕನಿಷ್ಠ 100, 200 ಮತ್ತು ಗರಿಷ್ಠ 500 ರೂ. ದಂಡ ವಿಧಿಸಲಾಗಿದ್ದು, ಈ ಪ್ರಕರಣಗಳಿಗೆ ಕನಿಷ್ಠವೆಂದರೂ 25,000 ರೂ. ದಂಡ ವಿಧಿಸಬಹುದಾಗಿದೆ.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ವಿ. ಅನ್ಬುಕುಮಾರ್, "10 ತಿಂಗಳಿಗಿಂತ ಕಡಿಮೆ ಅವಧಿಗೆ ಕರ್ತವ್ಯಕ್ಕೆ ಗೈರುಹಾಜರಾದ ನೌಕರರಿಗೆ ಯಾವುದೇ ಶಿಸ್ತು ಕ್ರಮದಿಂದ ವಿನಾಯಿತಿ ನೀಡಿ ವರದಿ ಆದೇಶ ಹೊರಡಿಸಿ ಬಸ್ ಓಡಿಸಲು ಅವಕಾಶ ಕಲ್ಪಿಸಲಾಗಿದೆ," ಎಂದು ಹೇಳಿದರು.
"ಅದರಂತೆ ಕಳೆದ ಮೂರು ದಿನಗಳಿಂದ 110 ಗೈರು ಹಾಜರಾದ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಂಸ್ಥೆಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ 7,200 ಶಿಸ್ತಿನ ಮೊಕದ್ದಮೆಗಳನ್ನು ಏಕಕಾಲದಲ್ಲಿ ಪರಿಹಾರ ಮತ್ತು ಸದ್ಭಾವನೆಯಿಂದ ಮನ್ನಾ ಮಾಡಲಾಗಿದೆ, ನೌಕರರನ್ನು ಶಿಕ್ಷಿಸುವುದು ಮಾತ್ರವಲ್ಲದೆ ಅವರ ಕಲ್ಯಾಣಕ್ಕಾಗಿ ಪ್ರೋತ್ಸಾಹ, ಪ್ರೇರಣೆ ಮತ್ತು ಕೆಲಸ ಮಾಡುವುದು ನಮ್ಮ ಕರ್ತವ್ಯ," ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಹೇಳಿದರು.
Recommended Video

"ಕಳ್ಳತನ/ಅಪಘಾತ/ಗೈರುಹಾಜರಿ ಪ್ರಕರಣಗಳಲ್ಲಿ ಭಾಗಿಯಾಗದಂತೆ ನೌಕರರಿಗೆ ಇದು ಕೇವಲ ಒಂದು ಬಾರಿ ಸಡಿಲಿಕೆಯಾಗಿದೆ," ಎಂದು ವಿ. ಅನ್ಬುಕುಮಾರ್ ಒತ್ತಿ ಹೇಳಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications