ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

KSRTC ಮುಷ್ಕರ: ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

|
Google Oneindia Kannada News

ಬೆಂಗಳೂರು, ಫೆಬ್ರವರಿ.19: ಸಾರಿಗೆ ನೌಕರರನ್ನೂ ಕೂಡಾ ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಆಗ್ರಹಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಪೊಲೀಸರ ಅನುಮತಿ ಸಿಕ್ಕಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಗುರುವಾರ ರಾಜ್ಯಾದ್ಯಂತ ಕೆಎಸ್ಆರ್ ಟಿವಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ಸಂಚಾರವು ಸಹಜ ಸ್ಥಿತಿಯಲ್ಲಿ ಇರುತ್ತದೆ ಎಂದು ಕೆಎಸ್ಆರ್ ಟಿಸಿ ನೌಕರರ ಸಂಘವು ತಿಳಿಸಿದೆ.

ಕಾರ್ಮಿಕರ ಮುಷ್ಕರ; ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್?ಕಾರ್ಮಿಕರ ಮುಷ್ಕರ; ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್?

ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿಯ 20 ಸಾವಿರಕ್ಕೂ ಅಧಿಕ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಇದಕ್ಕೆ ಪೊಲೀಸರೂ ಸಹ ಅನುಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

KSRTC Strike: No Variation In Bus Trafficking

ಈಶಾನ್ಯ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಗಳ ಬೆಂಬಲ:

ಇನ್ನು, ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ವಾಯುವ್ಯ ಕರ್ನಾಟಕರ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೆಂಬಲವನ್ನು ಸೂಚಿಸಿದ್ದಾರೆ. ಸರ್ಕಾರಿ ನೌಕರರು ಹಾಗೂ ನಿಗಮ ಮಂಡಳಿ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಜೊತೆಗೆ ಸರ್ಕಾರಿ ನೌಕರರಿಗೆ ಸಿಗುತ್ತಿರುವ ಸವಲತ್ತುಗಳನ್ನು ಈ ನಿಗಮ ಮಂಡಳಿ ನೌಕರರಿಗೆ ನೀಡುತ್ತಿಲ್ಲ. ನಿಗಮ ಮಂಡಳಿಗಳು ಆರ್ಥಿಕ ತೊಂದರೆಯಲ್ಲಿದ್ದು, ಈ ಸೌಲಭ್ಯವನ್ನು ನಿಗಮ ಮಂಡಳಿ ನೌಕರರಿಗೂ ಸಿಗುವಂತೆ ಆಗಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

English summary
KSRTC Strike: There Is No Difference In Bus Traffic Across Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X