KSRTC: ಸಂಚಾರಕ್ಕೆ ಸಿದ್ಧಗೊಂಡ ಅಶ್ವಮೇಧ: 100 ಹೊಸ ಬಸ್‌ಗಳ ವಿವರ ತಿಳಿಯಿರಿ

ಬೆಂಗಳೂರು, ಫೆಬ್ರವರಿ 03: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಹಲವಾರು ಬದಲಾವಣೆಗಳಾಗುತ್ತಿದ್ದು, ನೂತನ ರೀತಿಯ ಬಸ್‌ಗಳನ್ನು ರಾಜ್ಯ ಸರ್ಕಾರ ರಸ್ತೆಗಳಿಸುತ್ತಿದೆ. ಜನದಟ್ಟಣೆ ಕಡಿಮೆ ಮಾಡಲು ಹೆಚ್ಚು ಹೆಚ್ಚು ಸಾರಿಗೆ ಬಸ್‌ಗಳು ಸಂಚಾರ ನಡೆಸುತ್ತಿದ್ದು, ಪ್ರಯಾಣಿಕರ ಸುಖಕರ ಪ್ರಯಾಣಕ್ಕಾಗಿ ವಿನೂತನ ಬಸ್‌ಗಳನ್ನು ಆರಂಭಿಸಲಾಗಿದೆ.

ಅಂಬಾರಿ ಉತ್ಸವ ಬಸ್‌, ಪಲ್ಲಕ್ಕಿ ಉತ್ಸವ ಬಸ್‌ಗಳನ್ನು ಇತ್ತೀಚಿಗೆ ಪರಿಚಯಿಸಲಾಗಿದ್ದು, ಇದೀಗ ಕೆಎಸ್‌ಆರ್‌ಟಿಸಿಯ ನೂತನ ವಿನ್ಯಾಸ ಪಾಯಿಂಟು ಟು ಪಾಯಿಂಟ್‌ ಎಕ್ಸಪ್ರೆಸ್‌ ಅಶ್ವಮೇಧ ಬಸ್‌ಗಳನ್ನು ರಸ್ತೆಗಿಳಿಸಲು ಕರ್ನಾಟಕ ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಬಸ್‌ ಪ್ರಯಾಣಿಕರಿಗಾಗಿ ಈ ಹೊಸ ವಿನ್ಯಾಸದ ಹೊಸ ಬ್ರಾಂಡ್‌ನ ಕೆಎಸ್‌ಆರ್‌ಟಿ ಬಸ್ ಶೀಘ್ರದಲ್ಲೇ ಆರಂಭವಾಗಲಿದೆ.

KSRTC To Launch 100 New Ashvamedha Classic Buses For Point-To-Point Services On Feb 5th

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಫೆಬ್ರವರಿ 05 ಸೋಮವಾರ 100 ಹೊಸ ಅಶ್ವಮೇಧ ಬಸ್‌ಗಳನ್ನು ಬಿಡುಗಡೆ ಮಾಡಲಿದ್ದು, ವಿಧಾನಸೌಧದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಸ್‌ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪಾಯಿಂಟು ಟು ಪಾಯಿಂಟ್‌ ಎಕ್ಸಪ್ರೆಸ್‌ ಅಶ್ವಮೇಧ ಬಸ್‌ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ಬೆಂಗಳೂರು ನಡುವೆ ಸಂಚಾರ ನಡೆಸಲಿದ್ದು, ಈ ಬಸ್‌ನಲ್ಲಿರುವ ಸೌಲಭ್ಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಇದೊಂದು ಹೊಸ ವಿನ್ಯಾಸದ ನಾನ್‌ ಎಸಿ ಕೆಎಸ್‌ಆರ್‌ಟಿಸಿ ಬಸ್‌ ಆಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗುವ ರೀತಿ ವಿನ್ಯಾಸ ಮಾಡಲಾಗಿದೆ.

ಅಶ್ವಮೇಧ ಬಸ್‌ಗಳ ವಿಶೇಷತೆ ಏನು..?

ಪಾಯಿಂಟು ಟು ಪಾಯಿಂಟ್‌ ಎಕ್ಸಪ್ರೆಸ್‌ ಅಶ್ವಮೇಧ ಬಸ್‌ಗಳು 3.42 ಮೀಟರ್ ಎತ್ತರವಿದೆ. ಈ ಬಸ್‌ನಲ್ಲಿ 52 ಆಸನಗಳಿದ್ದು, ಬಕೆಟ್ ಟೈಪ್ ವಿನ್ಯಾಸವನ್ನು ಹೊಂದಿವೆ. 'ಪ್ರಯಾಣದ ಮರು ಕಲ್ಪನೆ' ಎಂಬ ವಾಕ್ಯದೊಂದಿಗೆ ಈ ಬಸ್‌ಗಳನ್ನು ಪರಿಚಯಿಸಲಾಗುತ್ತಿದೆ. ಈ ಬಸ್‌ಗಳ ಮುಂದಿನ ಮತ್ತು ಹಿಂದಿನ ಗಾಜುಗಳು ವಿಶಾಲವಾಗಿದೆ. ಕಿಟಕಿ ಪ್ರೇಮ್ ಹಾಗೂ ಗಾಜು ದೊಡ್ಡಾಗಿದ್ದು, ಟಿಂಟೆಡ್ ಗಾಜುಗಳನ್ನು ಹೊಂದಿವೆ. ಹಾಗೂ ಈ ಬಸ್‌ನಲ್ಲಿ ಸ್ಥಳ ಟ್ರ್ಯಾಕರ್‌, ಪ್ಯಾನಿಕ್‌ ಬಟನ್‌ ಹಾಗೂ ಬಸ್‌ ಒಳಗಿನ ಮುಂಭಾಗದಲ್ಲಿ ಎಲ್‌ಇಡಿ ಮಾರ್ಗ ಫಲಕಗಳಿರಲಿದ್ದು, ಲಗೇಜ್‌ ಕ್ಯಾರಿಯರ್‌ಗಳನ್ನು ವಿನೂತನವಾಗಿ ವಿನ್ಯಾಸ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+