ಗೌರಿ-ಗಣೇಶ ಹಬ್ಬ, ಕೆಎಸ್ಆರ್‌ಟಿಸಿಯಿಂದ1000 ಹೆಚ್ಚುವರಿ ಬಸ್
ಬೆಂಗಳೂರು, ಅ.22 : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ 1000 ಹೆಚ್ಚುವರಿ ಬಸ್ಸು ವ್ಯವಸ್ಥೆಯನ್ನು ಮಾಡಿದೆ. ಆನ್‌ಲೈನ್ ಮೂಲಕವೂ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಆಗಸ್ಟ್ 23ರ ಬುಧವಾರದಿಂದ ರಿಂದ 26ರ ತನಕ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಕ್ಕೆ ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಕಡೆ ತೆರಳುವ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿವೆ.
ಮೈಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಸಂಚಾರ ನಡೆಸುವ ಹೆಚ್ಚುವರಿ ಬಸ್ಸುಗಳು ಮೈಸೂರು ರಸ್ತೆ ಬಸ್ (ಸ್ಯಾಟಲೈಟ್) ನಿಲ್ದಾಣದಿಂದ ಸಂಚಾರ ನಡೆಸಲಿವೆ. ಹೊರ ರಾಜ್ಯಗಳಿಗೆ ತೆರಳುವ ಬಸ್ಸುಗಳು ಶಾಂತಿ ನಗರ ಬಸ್ ನಿಲ್ದಾಣದಿಂದ ಸಂಚಾರ ನಡೆಸಲಿವೆ.
ನಾಲ್ಕು ಅಥವ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇ 5ರಷ್ಟು, ಹೋಗುವ ಮತ್ತು ವಾಪಸ್ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದರೆ ಶೇ 10ರಷ್ಟು ರಿಯಾಯಿತಿ ದೊರೆಯಲಿದೆ. ಆನ್ ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ವಿಳಾಸ












Click it and Unblock the Notifications