ಗಣೇಶ ಚತುರ್ಥಿ : ಕೆಎಸ್ಆರ್‌ಟಿಸಿಯಿಂದ 1 ಸಾವಿರ ವಿಶೇಷ ಬಸ್
ಬೆಂಗಳೂರು, ಸೆಪ್ಟೆಂಬರ್, 09 : ಕೆಎಸ್ಆರ್‌ಟಿಸಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಸೆ.15 ಮತ್ತು 16ರಂದು ಈ ಬಸ್ಸುಗಳು ಸಂಚರಿಸಲಿವೆ.
ಮೆಜೆಸ್ಟಿಕ್, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿ ನಗರ ಬಸ್ ನಿಲ್ದಾಣದಿಂದ ವಿಶೇಷ ಬಸ್ಸುಗಳು ಸಂಚಾರ ನಡೆಸಲಿವೆ. ಆಯಾ ಬಸ್ ನಿಲ್ದಾಣದಲ್ಲಿಯೇ ಮುಂಗಡ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೆ.15ರ ಮಂಗಳವಾರ ಮತ್ತು ಸೆ.16ರ ಬುಧವಾರ ಈ ಬಸ್ಸುಗಳು ಸಂಚಾರ ನಡೆಸಲಿವೆ. [2015ನೇ ಸಾಲಿನ ಸರ್ಕಾರಿ ರಜೆ ಪಟ್ಟಿ]

4 ಅಥವ ಅದಕ್ಕಿಂತ ಹೆಚ್ಚು ಟಿಕೆಟ್ ಕಾಯ್ದಿರಿಸಿದರೆ ಶೇ 5ರಷ್ಟು ರಿಯಾಯಿತಿ ಮತ್ತು ಹೋಗುವ ಮತ್ತು ಬರುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆನ್‌ಲೈನ್ ಮೂಲಕವೂ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. [ಟಿಕೆಟ್ ಬುಕ್ ಮಾಡಲು ವಿಳಾಸ]
ಎಲ್ಲಿಂದ ಹೊರಡಲಿದೆ ಬಸ್ : ಮೆಜೆಸ್ಟಿಕ್‌ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಸ್ಥಳಗಳಿಗೆ ತೆರಳುವ ವಿಶೇಷ ಬಸ್ ಸಂಚಾರ ನಡೆಸಲಿದೆ. [ಬೆಂಗಳೂರು ಸಿಟಿ ಟ್ಯಾಕ್ಸಿ ದೂರವಾಣಿ ಸಂಖ್ಯೆಗಳು]
ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ತೆರಳುವ ವಿಶೇಷ ಬಸ್ಸುಗಳು ಹೊರಡಲಿವೆ. ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ತೆರಳುವ ಬಸ್ಸುಗಳು ಸಂಚಾರ ನಡೆಸಲಿವೆ.
ಅಂದಹಾಗೆ ಸೆ.16ರ ಬುಧವಾರ ಗೌರಿ ಹಬ್ಬವಿದ್ದು, ಸೆ.17ರ ಗುರುವಾರ ಗಣೇಶ್ ಚತುರ್ಥಿ ಇದೆ.












Click it and Unblock the Notifications