ಅಕ್ಟೋಬರ್ 23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ

ಬೆಂಗಳೂರು, ಅಕ್ಟೋಬರ್ 21 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಕೆಎಸ್ಆರ್‌ಟಿಸಿ ಬುಧವಾರ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಕೋವಿಡ್ ಲಾಕ್ ಡೌನ್ ಸಡಿಲಗೊಂಡಿರುವ ಪರಿಣಾಮ ಜನರ ಅನುಕೂಲಕ್ಕಾಗಿ ಬಸ್ ಸೇವೆಯನ್ನು ಪುನಃ ಆರಂಭಿಸಲಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು-ಪುದುಚೇರಿ ನಡುವೆ ಜನರ ದಟ್ಟಣೆ ಅನುಗುಣವಾಗಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬಸ್‌ನಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಂಚಾರ ನಡೆಸಬೇಕಾಗುತ್ತದೆ.

KSRTC To Resume Bus Services Between Bengaluru Puducherry

ಬಸ್‌ನಲ್ಲಿ ಸಂಚಾರ ನಡೆಸುವ ಜನರಿಗೆ ಮುಂಗಡ ಟಿಕೆಟ್‌ ಬುಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಪ್ರಯಾಣಿಕರು ಈ ಸೇವೆಯ ಉಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಮಾರ್ಚ್‌ನಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದಾಗ ಕೆಎಸ್ಆರ್‌ಟಿಸಿ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಅನ್ ಲಾಕ್ ಮಾರ್ಗಸೂಚಿ ಪ್ರಕಟವಾದ ಬಳಿಕ ಹಂತ-ಹಂತವಾಗಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.

ಪ್ರಸ್ತುತ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಗೆ ಬಸ್‌ ಸಂಚಾರವನ್ನು ಆರಂಭಿಸಲಾಗುತ್ತಿದೆ. ಅಂತರರಾಜ್ಯಗಳ ನಡುವೆ ಸಂಚಾರ ನಡೆಸುವ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+