ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

KSRTC: ಯುಗಾದಿ ಪ್ರಯುಕ್ತ ರಾಜ್ಯದೆಲ್ಲೆಡೆ 600 ಹೆಚ್ಚುವರಿ ಬಸ್ ಸೇವೆ

|
Google Oneindia Kannada News

ಬೆಂಗಳೂರು, ಏ.3: ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ ವಿವಿಧೆಡೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಖಾಸಗಿ ಬಸ್‌ಗಳು ಸುಲಿಗೆಗೆ ನಿಂತಿವೆ, 600-700 ಇದ್ದ ಬಸ್‌ ದರ ಏಕಾಏಕಿ 1500ಕ್ಕೆ ಏರಿದೆ. ಹೀಗಿರುವ ಕಾರಣ ಕೆಎಸ್‌ಆರ್‌ಟಿಸಿ 600 ಹೆಚ್ಚುವರಿ ಬಸ್‌ಗಳ ಸೇವೆಯನ್ನು ನೀಡಲು ಮುಂದಾಗಿದೆ.

ಏ. 7ರಂದು ನಾನಾ ಭಾಗಗಳಿಂದ ನಗರಕ್ಕೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಿದೆ.ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು.

 KSRTC to run 600 extra buses for ugadi

ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ, ವಾಪಸ್‌ ಬರುವ ದರದಲ್ಲಿ ಶೇ 5ರಷ್ಟು ರಿಯಾಯಿತಿ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೈಟ್‌ನಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ತೆರಳಲಿವೆ.

ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಸೇರಿದಂತೆ ಇತರೆ ಸ್ಥಳಗಳಿಗೆ ಸಂಚರಿಸುವ ಬಸ್‌ಗಳು ಶಾಂತಿನಗರದಲ್ಲಿನ ಕೇಂದ್ರ ಘಟಕ- 4 ಮತ್ತು ಘಟಕ-2ರ ಮುಂಭಾಗದಿಂದ ಹೊರಡಲಿವೆ.

ಬಸವೇಶ್ವರ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ಬಿಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

English summary
KSRTC decided to run 600 special buses during ugadi Festival. Huge demand is there for buses during festival
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X