ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ
Recommended Video

ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ | Oneindia Kannada
ಬೆಂಗಳೂರು, ನವೆಂಬರ್ 03: ಸಿಎಂ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಮಲ್ಲೇಶ್ವರದ ಇತಿಹಾಸ ಪ್ರಸಿದ್ಧ ಕಾಡು ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಲ್ಲೇಶ್ವರದಲ್ಲಿ ಇಂದು ಕಡಲೇಕಾಯಿ ಪರಿಶೆ ಇದ್ದು, ಕಾರ್ತಿಕ ಸೋಮವಾರವಾದ ಇಂದು ಕಾಡು ಮಲ್ಲೇಶ್ವರ ಸ್ವಾಮಿ ದೇವರ ವಿಶೇಷ ಪೂಜೆ ಇತ್ತು. ಹಾಗಾಗಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದರು.
ಇದೇ ದಿನ ಕುಮಾರಸ್ವಾಮಿ ಅವರು, ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೊದಲಿಗೆ ಅಂಗವಿಕಲರ ಅಹವಾಲುಗಳನ್ನು ಆಲಿಸಿದ ಕುಮಾರಸ್ವಾಮಿ, ಅವರಿಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ನಂತರ ನಡೆದ ಸಮಾರಂಭದಲ್ಲಿ ಈ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಮತ್ತಿತರರು ಹಾಜರಿದ್ದರು.












Click it and Unblock the Notifications