ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ, ಯಡಿಯೂರಪ್ಪ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ, ಯಡಿಯೂರಪ್ಪ ವಾಗ್ದಾಳಿ. ಸಿಎಂಗೆ ಅಹಂಕಾರ ಬಂದಿದೆ ಎಂದ ನಾಯಕರು. ಬೆಂಗಳೂರು ಅಭಿವೃದ್ಧಿಯಾಗಿಲ್ಲ ಎಂದು ಕುಮಾರ ಸ್ವಾಮಿ. ಕಿತ್ತೂರು ರಾಣಿ ಚೆನ್ನಮ್ಮ ವಿವಿ ಹೆಸರು ಬದಲಿಸಿದರೆ ಹೋರಾಟ ಎಂದ ಯಡಿಯೂರಪ್ಪ.

ಬೆಂಗಳೂರು, ಆಗಸ್ಟ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದುರಹಂಕಾರ ಹೆಚ್ಚಾಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಜೆಡಿಎಸ್ ಪಕ್ಷವು ಕೇವಲ 2 ಅಥವಾ 3 ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದ್ದಾರೆ. ಇದು ದುರಂಹಂಕಾರದ ಹೇಳಿಕೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವುದು ನಮ್ಮ ಗುರಿಯಾಗಿದ್ದು, ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Kumaraswamy and BS Yeddyurappa lashes out against CM Siddaramaiah

ತಮ್ಮ ವಾಗ್ದಾಳಿ ಮುಂದುವರಿಸಿದ ಅವರು, ''ಬೆಂಗಳೂರನ್ನು ಅಭಿವೃದ್ಧಿಪಡಿಸಿರುವುದಾಗಿ ಸಿದ್ದರಾಮಯ್ಯ ಭರ್ಜರಿ ಜಾಹೀರಾತು ಹಾಕುತ್ತಿದ್ದಾರೆ. ಆದರೆ, ಜೋರು ಮಳೆ ಸುರಿದ ನಂತರವಷ್ಟೇ ಬೆಂಗಳೂರಿನ ಅಸಲೀತನ ಬಯಲಿಗೆ ಬಂದಿದೆ. ಇದರಿಂದ ಕ್ರುದ್ಧರಾಗಿರುವ ಜನರು, ಮುಂದಿನ ಚುನಾವಣೆಯನ್ನು ಎದುರು ನೋಡುತ್ತಿದ್ದು ಆಗ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ'' ಎಂದು ರೇಗಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೂ ಸಿದ್ದರಾಮಯ್ಯ ಅವರನ್ನು ದುರಹಂಕಾರಿ ಎಂದು ಬಣ್ಣಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಇಂದಿರಾ ಗಾಂಧಿ ಹೆಸರಿಡಲು ನಿರ್ಧರಿಸಿರುವ ಸಿದ್ದರಾಮಯ್ಯ ಅವರಿಗೆ ದುರಹಂಕಾರ ಬಂದಿದೆ ಎಂದರು. ರಾಣಿ ಚೆನ್ನಮ್ಮ ಹೆಸರನ್ನು ಬದಲಿಸಿ ಇಂದಿರಾ ಗಾಂಧಿ ಎಂದು ಹೆಸರಿಟ್ಟರೆ ಹೋರಾಟ ಮಾಡುತ್ತೇವೆ'' ಎಂದು ಎಚ್ಚರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+